ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಕೂಗು ಜೋರಾಗಿದೆ. ಬಿಎಸ್ ವೈ ಯಡಿಯೂರಪ್ಪನವರ ಬೆಂಬಲಕ್ಕೆ ವೀರಶೈವ ಲಿಂಗಾಯತ ಧರ್ಮ ಮಠಾಧೀಶರು ಬೆಂಬಲಕ್ಕೆ ನಿಂತಿದ್ದಾರೆ. ಮುಖ್ಯಮಂತ್ರಿಗಳನ್ನ ಬದಲಾವಣೆ ಮಾಡಬಾರದು ಮುಂದುವರಿಸಿ ಎಂದು ನಿಡುಮಾಮಿಡಿ ಮಠದ ಸ್ವಾಮೀಜಿ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಮಠಾಧಿಪತಿಗಳು ಒತ್ತಾಯಿಸಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿವಾಚಾರ್ಯ ಸ್ವಾಮೀಜಿ, ಉತ್ತರಪ್ರದೇಶದಂತೆ ನಮ್ಮ ರಾಜ್ಯದಲ್ಲೂ ಮಠಾಧೀಶರನ್ನ ಮುಖ್ಯಮಂತ್ರಿ ಮಾಡಿ ಅಂತಾ ಹೇಳಿದ್ದಾರೆ. ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥರನ್ನ ಸಿಎಂ ಅಗಿ ನೇಮಕ ಮಾಡಲಾಗಿದೆ. ಅದೇ ರೀತಿ ರಾಜ್ಯದಲ್ಲೂ ಮಠದ ಸ್ವಾಮೀಜಿಗಳನ್ನ ಸಿಎಂ ಆಗಿ ನೇಮಕ ಮಾಡಬಹುದು. ರಾಜ್ಯದಲ್ಲಿ ಹಲವಾರು ಜಾತಿ ವ್ಯವಸ್ಥೆ ಇದೆ. ಆ ಜಾತಿಯಲ್ಲಿ ಮಠಾಧೀಶರು ಕೂಡ ಇದ್ದಾರೆ. ಯಾವುದೇ ಧರ್ಮವೇ ಇರಲಿ, ಅವರು ಧರ್ವವನ್ನ ಉಳಿಸಿಕೊಂಡು ಹೋಗುತ್ತಾರೆ ಎಂದರು.ಧರ್ಮವನ್ನ ಕಾಪಾಡಲು ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥರನ್ನ ಸಿಎಂ ಮಾಡಲಾಗಿದೆ. ಅದೇ ರೀತಿ ರಾಜ್ಯದಲ್ಲೂ ಯೋಗ್ಯ ಗುರುಗಳನ್ನ ಆಯ್ಕೆ ಮಾಡಿ. ಯೋಗಿಗಳನ್ನ ಸಿಎಂ ಆಗಿ ನೇಮಕ ಮಾಡಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ- ದೆಹಲಿಗೆ ಹಾರಿದ ಸಚಿವ ನಿರಾಣಿSign in to your account
Username or Email Address


Password

 Remember Me


