ಬೆಂಗಳೂರು: ಧಾರಕಾರವಾಗಿ ಮಳೆಯಿಂದಾಗಿ ರಾಜ್ಯದ ಹಲವು ಕಡೆ ಪ್ರವಾಹ ಉಂಟಾಗಿದ್ದು, ಈ ಹಿನ್ನೆಲೆ ನಾಳೆಯಿಂದ ಆರಂಭವಾಗಲಿರುವ ಖಾಸಗಿ ವಿದ್ಯಾರ್ಥಿಗಳ ಕೆಎಸ್‍ಓ(ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ) 10ನೇ ತರಗತಿ ಪರೀಕ್ಷೆ ಮುಂದೂಡುವಂತೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್‍ರವರಿಗೆ ಮನವಿ ಮಾಡಲಾಯಿತು.ನಾಳೆಯಿಂದ ರಾಜ್ಯಾದ್ಯಂತ ಖಾಸಗಿ ವಿದ್ಯಾರ್ಥಿಗಳ ಕೆಓಎಸ್ 10 ನೇ ತರಗತಿ ಪರೀಕ್ಷೆ ಆರಂಭವಾಗುತ್ತಿದೆ. ರಾಜ್ಯಾದಂತ್ಯ 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದೆ. ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಗೆ ಹಾಜರಾಗಲು ತೊಂದರೆಯಾಗಿದೆ ಎಂದು ಕರ್ನಾಟಕ ಓಪನ್ ಸ್ಕೂಲ್ ಭಾರತಿ ಇನ್ಸ್ ಸ್ಟಿಟ್ಯೂಟ್ ಆಫ್ ಸ್ಕೂಲಿಂಗ್ ಆಫ್ ಎಜುಕೇಶನ್ ನಿಂದ ಶಿಕ್ಷಣ ಸಚಿವರಿಗೆ ಮನವಿ ಮಾಡಲಾಗಿದೆ.ಮಳೆ ಹೆಚ್ಚಾಗಿರುವ ಉತ್ತರ ಕರ್ನಾಟಕ ಭಾಗದಲ್ಲೇ 4 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ನಾಳೆ ಪರೀಕ್ಷೆಗೆ ಇನ್ನೂ ಯಾರು ಸಹ ಹಾಲ್ ಟಿಕೆಟ್ ಪಡೆದಿಲ್ಲ. ಹಾಗಾಗಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಆರಂಭವಾಗುವ ಪರೀಕ್ಷೆ ಹಾಜರಾಗುವುದು ಕಷ್ಟವಾಗಿದೆ. ಶಿಕ್ಷಣ ಸಚಿವರು ತಕ್ಷಣ ಈ ಬಗ್ಗೆ ಗಮನ ಹರಿಸಿ ಪರೀಕ್ಷೆ ಮುಂದೂಡಿ ವಿದ್ಯಾರ್ಥಿಗಳ ತೊಂದರೆಯಾಗದಂತೆ ಕ್ರಮವಹಿಸಬೇಕೆಂದು ಕೋರಿದ್ದಾರೆ. ಇದನ್ನೂ ಓದಿ:10 ನಿಮಿಷಕ್ಕಿಂತ ಹೆಚ್ಚು ಟೈಂ ಒಂದೇ ಕಡೆ ನಿಲ್ಲೋವಂತಿಲ್ಲ – ಹೊಯ್ಸಳ ಪೊಲೀಸರಿಗೆ ಖಡಕ್ ಎಚ್ಚರಿಕೆ






 Advertisement 




Sign in to your account
Username or Email Address


Password

 Remember Me


