ಬೆಂಗಳೂರು: ರಾಜ್ಯದಲ್ಲಿಂದು 1,705 ಜನಕ್ಕೆ ಕೊರೊನಾ ಸೋಂಕು ತಗುಲಿದ್ದು, 2,243 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಕೊರೊನಾಗೆ 30 ಮಂದಿ ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.35 ಮತ್ತು ಮರಣ ಪ್ರಮಾಣ ಶೇ.1.75ಕ್ಕೆ ಇಳಿದಿದೆ. ಸದ್ಯ ರಾಜ್ಯದಲ್ಲಿ 24,127 ಸಕ್ರಿಯ ಕೊರೊನಾ ಪ್ರಕರಣಗಳಿದ್ದು, ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಇದುವರೆಗೂ 28,91,699 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 36,323 ಮಂದಿಯನ್ನು ಮಹಾಮಾರಿ ಬಲಿ ಪಡೆದುಕೊಂಡಿದೆ.ಇಂದು ರಾಜ್ಯದಲ್ಲಿ ಒಟ್ಟು 1,25,426 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಒಟ್ಟು 11 ಜಿಲ್ಲೆಗಳಲ್ಲಿ ಮರಣ ಶೂನ್ಯ ಸುತ್ತಿದ್ದು, ಬೆಂಗಳೂರು ನಗರ, ದಕ್ಷಿಣ ಕನ್ನಡ, ಮೈಸೂರು ಮತ್ತು ಉಡುಪಿಯಲ್ಲಿ ಕೊರೊನಾ ಪ್ರಕರಣಗಳ ಮೂರಂಕಿಯಲ್ಲಿ ದಾಖಲಾಗಿವೆ.ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 8, ಬಳ್ಳಾರಿ 10, ಬೆಳಗಾವಿ 90, ಬೆಂಗಳೂರು ಗ್ರಾಮಾಂತರ 41, ಬೆಂಗಳೂರು ನಗರ 400, ಬೀದರ್ 2, ಚಾಮರಾಜನಗರ 30, ಚಿಕ್ಕಬಳ್ಳಾಪುರ 17, ಚಿಕ್ಕಮಗಳೂರು 69, ಚಿತ್ರದುರ್ಗ 19, ದಕ್ಷಿಣ ಕನ್ನಡ 295, ದಾವಣಗೆರೆ 20, ಧಾರವಾಡ 6, ಗದಗ 3, ಹಾಸನ 83, ಹಾವೇರಿ 4, ಕಲಬುರಗಿ 7, ಕೊಡಗು 62, ಕೋಲಾರ 34, ಕೊಪ್ಪಳ 3, ಮಂಡ್ಯ 38, ಮೈಸೂರು 157, ರಾಯಚೂರು 1, ರಾಮನಗರ 8, ಶಿವಮೊಗ್ಗ 74, ತುಮಕೂರು 72, ಉಡುಪಿ 131, ಉತ್ತರ ಕನ್ನಡ 23, ವಿಜಯಪುರ 4 ಮತ್ತು ಯಾದಗಿರಿಯಲ್ಲಿ 3 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.Sign in to your account
Username or Email Address


Password

 Remember Me


