ಹಾವೇರಿ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಮೋಡಕವಿದ ವಾತಾವರಣದೊಂದಿಗೆ ಮಳೆ ಬೀಳುತ್ತಿದೆ.ಹಾವೇರಿ ನಗರ ಸೇರಿದಂತೆ ಜಿಲ್ಲೆಯ 8 ತಾಲೂಕಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಆಗಾಗ ಬೀಳುತ್ತಿರೋ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಸವಣೂರು ತಾಲೂಕಿನ ಕಳಸೂರು ಗ್ರಾಮದ ಬಳಿ ಇರೋ ಬ್ರಿಡ್ಜ್ ಕಂ ಬ್ಯಾರೇಜ್ ಮೇಲಿನ ಸಂಪರ್ಕ ಕಡಿತಗೊಂಡಿದೆ.ವರದಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಬ್ರಿಡ್ಜ್ ಕಂ ಬ್ಯಾರೇಜ್ ಮೇಲೆ ನೀರು ಹರಿತಿರುವುದರಿಂದ ಸಂಪರ್ಕ ಕಡಿತಗೊಂಡಿದೆ. ಕಳಸೂರು ಗ್ರಾಮದಿಂದ ದೇವಗಿರಿ, ಗಣಜೂರು, ಹಾವೇರಿ ಮತ್ತು ಕೋಳೂರಿಗೆ ಗ್ರಾಮಕ್ಕೆ ಓಡಾಡುತ್ತಿದ್ದ ಜನರಿಗೆ ಸಂಪರ್ಕ ಕಡಿತಗೊಂಡಿದೆ.ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರೋ ಹಿನ್ನೆಲೆಯಲ್ಲಿ ಹಿರೇಕೆರೂರು ಪಟ್ಟಣದ ದುರ್ಗಾದೇವಿ ಕೆರೆಗೂ ಭರಪೂರ ನೀರು ಬಂದಿದೆ.Sign in to your account
Username or Email Address


Password

 Remember Me


