ಹಾಸನ: ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸದಂತೆ ಹಾಸನದ ಹೇಮಾವತಿ ಪ್ರತಿಮೆ ಎದುರು ವೀರಶೈವ ಲಿಂಗಾಯುತ ಸಮುದಾಯದಿಂದ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.ಪ್ರತಿಭಟನೆಯಲ್ಲಿ 50ಕ್ಕೂ ಹೆಚ್ಚು ಲಿಂಗಾಯುತ ಮುಖಂಡರು ಭಾಗಿಯಾಗಿದ್ದು, ಹಾಸನದಲ್ಲಿ ಸುರಿಯುತ್ತಿರುವ ಮಳೆಯಲ್ಲೂ ಪ್ರತಿಭಟನೆಯಲ್ಲಿ ಅನೇಕ ಮುಖಂಡರುಗಳು ಭಾಗವಹಿಸಿ ಯಡಿಯೂರಪ್ಪ ಪರ ಜೈಕಾರ ಕೂಗಿದ್ದಾರೆ.ಯಡಿಯೂರಪ್ಪ ಕೊರೊನಾ ಸಮಯದಲ್ಲಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ. ರಾಜ್ಯಕ್ಕೆ ಉತ್ತಮ ಆಡಳಿತ ನೀಡಿದ್ದಾರೆ. ಹೀಗಿರುವಾಗ ಬಿಎಸ್‍ವೈ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವುದು ಸರಿಯಲ್ಲ. ಉಳಿದಿರುವ ಅವಧಿಗೆ ಬಿಎಸ್‍ವೈ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕು ಎಂದು ಪ್ರತಿಭಟನಾ ನಿರತರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಜನರು ಸಂಕಷ್ಟದಲ್ಲಿರುವಾಗ ಬಿಜೆಪಿಯ ಈ ಗೊಂದಲ ಸರಿಯಲ್ಲ: ಹೆಚ್‍ಡಿಕೆ






 Advertisement 




Sign in to your account
Username or Email Address


Password

 Remember Me


