ಚಿತ್ರದುರ್ಗ: ಕರ್ನಾಟಕ ರಾಜ್ಯಕ್ಕೆ ತಮ್ಮದೇ ಆದ ಅಪಾರ ಕೊಡುಗೆ ನೀಡಿರುವ ಸಿಎಂ ಯಡಿಯೂರಪ್ಪ ಅವರನ್ನೂ ಗೌರವದಿಂದ ನಡೆಸಿಕೊಳ್ಳಬೇಕು. ಇಲ್ಲವಾದರೆ ಬಿಜೆಪಿಗೆ ನಷ್ಟವಾಗಲಿದೆ ಎಂದು ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ.ಸಿಎಂ ಸ್ಥಾನದಿಂದ ಬಿಎಸ್ ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಚಿತ್ರದುರ್ಗದ ಮುರುಘಾ ಮಠದಿಂದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಎಸ್ ವೈ ತಳಮಟ್ಟದಿಂದ ಬಿಜೆಪಿ ಸಂಘಟನೆ ಮಾಡಿದ್ದಾರೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿದ ಹೆಗ್ಗಳಿಕೆ ಯಡಿಯೂರಪ್ಪ ಅವರ ಹೆಗಲಿಗಿದೆ.ನೇರ ನುಡಿ, ಧೀರ ನಡೆಗೆ ಸಿಎಂ ಯಡಿಯೂರಪ್ಪ ಹೆಸರಾಗಿದ್ದೂ, ಪ್ರತಿ ಚುನಾವಣೆ ಸಹ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಿವೆ. ಅಲ್ಲದೇ ಬಿಎಸ್‍ವೈ ರಾಜ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದು, ಮೇಧಾವಿ ಹಾಗೂ ಅಪ್ರತಿಮ ರಾಜಕೀಯ ಮುತ್ಸದ್ಧಿ ಬಿಎಸ್‍ವೈರನ್ನು ನಿರ್ಲಕ್ಷಿಸಿದರೆ ಬಿಜೆಪಿಗೆ ನಷ್ಟ ಸಾಧ್ಯತೆ ಇದೆ. ಆದ್ದರಿಂದ ಬಿಎಸ್ ವೈ ಅವರನ್ನು ಗೌರವದಿಂದ ನಡೆಸಿಕೊಳ್ಳಬೇಕು. ಈ ವೇಳೆ ನಾಯಕತ್ವ ಬದಲಾವಣೆ ಸಮಂಜಸವಲ್ಲ ಎಂದು ಬಿಜೆಪಿ ಹೈಕಮಾಂಡ್ ನಡೆ ವಿರುದ್ಧ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಸಚಿವ ಮುರುಗೇಶ್ ನಿರಾಣಿ ಬಳಿ ಸುಮಾರು 500 ಸಿ.ಡಿಗಳು ಇವೆ: ಅಲಂ ಪಾಷಾ






 Advertisement 




Sign in to your account
Username or Email Address


Password

 Remember Me


