ಬೆಂಗಳೂರು: ಎಲ್ಲಾ ಧರ್ಮದವರೂ ಒಂದು ತಾಯಿಯ ಮಕ್ಕಳಂತೆ ಇರಲು ಎಲ್ಲಾ ಧರ್ಮದವರಲ್ಲೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ತುಂಬಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.ಬೆಂಗಳೂರಿನ (Bengaluru) ಹೆಗಡೆ ನಗರದಲ್ಲಿರುವ ಹಜ್ ಭವನದಲ್ಲಿ (Haj Bhavan) ಆಯೋಜಿಸಲಾಗಿದ್ದ ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್‌ ಕೆಫೆ ಸ್ಫೋಟ – ಬೆಂಗಳೂರು ಟೆಕ್ಕಿಯ ಖಾತೆಗೆ ದಿಢೀರ್‌ ಭಾರೀ ಹಣ ಜಮೆ10,168 ಹಜ್ ಯಾತ್ರಿಗಳ ಪ್ರಯಾಣ ಸುಖಕರವಾಗಿರಲಿ ಎಂದು ಶುಭ ಕೋರಿದ್ದೇನೆ. ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ನೆಲಸಲಿ ಎಂದು ಪ್ರಾರ್ಥಿಸುವಂತೆ ತಿಳಿಸಿದ್ದೇನೆ. ಕುವೆಂಪು ಅವರು ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿದಂತೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಸಿಖ್ ಧರ್ಮದವರೆಲ್ಲಾ ಒಂದು ತಾಯಿಯ ಮಕ್ಕಳಂತೆ ಇರಬೇಕು. ಅಂಥ ವಾತಾವರಣ ನಿರ್ಮಾಣವಾಗಬೇಕಾದರೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ಬಂದು ಎಲ್ಲರೂ ಸಬಲರಾಗಬೇಕು. ಅದಕ್ಕೆ ಹಜ್ ಯಾತ್ರಿಗಳು ಪ್ರಾರ್ಥಿಸಲಿ. ಪ್ರಸ್ತುತ ಆರ್ಥಿಕ ವರ್ಷದಲ್ಲಿ ದೇಶ ಹಾಗೂ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಬೆಳೆ ಬರಲಿ. ನಾಡು ಸಮೃದ್ಧವಾಗಲಿ ಎಂದು ಪ್ರಾರ್ಥಿಸುವಂತೆ ಎಲ್ಲಾ ಯಾತ್ರಾರ್ಥಿಗಳಲ್ಲಿ ಮನವಿ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಇದನ್ನೂ ಓದಿ: ಕಿಲ್ಲರ್ ಬಾಯ್‌ಗೆ ಪುಣೆ ಠಾಣೆಯಲ್ಲಿ ರಾಜಾತಿಥ್ಯ – ಪಿಜ್ಜಾ, ಬಿರಿಯಾನಿ ತಿನ್ನಿಸಿದ್ದ ಪೊಲೀಸರ ವಿರುದ್ಧ ಆಕ್ರೋಶಹಜ್ ಭವನ ನಿರ್ಮಾಣಕ್ಕಾಗಿ ಅನುದಾನ:
ಮಂಗಳೂರು ಮತ್ತು ಕಲಬುರಗಿಯಲ್ಲಿ ಹಜ್ ಭವನ ನಿರ್ಮಾಣಕ್ಕಾಗಿ ಅನುದಾನ ಒದಗಿಸಲಾಗಿದೆ. ಕಲಬುರಗಿಯಲ್ಲಿ ಸ್ಥಳ ಸಿಗದೇ ವಿಳಂಬವಾಗಿದೆ. ಮಂಗಳೂರಿನಲ್ಲಿ ಸ್ಥಳ ಗುರುತಿಸಲಾಗಿದೆ ಎಂದರು. ನೀತಿ ಸಂಹಿತೆ ಮುಗಿದ ಮೇಲೆ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದರು. ಅಲ್ಲದೇ ಪ್ರತಿ ದಿನ ಹಜ್‌ಗೆ ತೆರಳುವವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸಚಿವ ಜಮೀರ್ ಅಹ್ಮದ್ ಅವರನ್ನು ಶ್ಲಾಘಿಸಿದರು. ಇದನ್ನೂ ಓದಿ: ಅಂಜನಾದ್ರಿ ಹುಂಡಿಗೆ ಪಾಕಿಸ್ತಾನದ ನಾಣ್ಯ







 Advertisement 











 Advertisement 




Sign in to your account
Username or Email Address


Password

 Remember Me


