ಬೆಂಗಳೂರು: ಸಿಲಿಕಾನ್ ಸಿಟಿಯ ವೈಟ್‍ಫೀಲ್ಡ್‍ನಲ್ಲಿ ನಡೆದಿದ್ದ ರಾಮೇಶ್ವರಂ ಬಾಂಬ್ ಸ್ಫೋಟಕ್ಕೆ ಇದೀಗ ಸ್ಫೋಟಕ ತಿರುವೊಂದು ಸಿಕ್ಕಿದೆ. ಪ್ರಕರಣದಲ್ಲಿ ಇಬ್ಬರು ಟ್ರೈನಿ ವೈದ್ಯರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.ಕೊಯಮತ್ತೂರು ಖಾಸಗಿ ಆಸ್ಪತ್ರೆಯ ಮೇಲೆ ಇಂದು ಎನ್‍ಐಎ ದಾಳಿ ನಡೆಸಿದೆ. ಮತೀನ್ ಮತ್ತು ಶಾಜೀಬ್ ಗೆ ಹಣ ಸಹಾಯ ಮಾಡಿದ ಆರೋಪದ ಮೇಲೆ ದಾಳಿ ನಡೆದಿದೆ. ಕರ್ನಾಟಕ ಮೂಲದ ಇಬ್ಬರು ಡಾಕ್ಟರ್ ಗಳು ಬ್ಲಾಸ್ಟ್ ಪ್ರಕರಣದಲ್ಲಿ ಭಾಗಿಯಾಗಿರುವ ಅನುಮಾನ ಎದ್ದಿದೆ.ಇತ್ತ ಬಾಂಬ್ ಬ್ಲಾಸ್ಟ್ ಪ್ರಕರಣ ಇಂದು ಬೆಂಗಳೂರಿನ ಕೆ ಎಸ್ ಲೇಔಟ್ ಮತ್ತು ಬನಶಂಕರಿ ಸೇರಿ 5ಕ್ಕೂ ಹೆಚ್ಚು ಕಡೆ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.  ಇದನ್ನೂ ಓದಿ: ತಣ್ಣಗಾಗದ ಧ್ವಜ ದಂಗಲ್- ಹೊಸ ಧ್ವಜ ಹಾರಿಸಿದ್ರೂ ಕೆರಗೋಡು ಗ್ರಾಮಸ್ಥರ ಅಸಮಾಧಾನಮಾರ್ಚ್ 1 ರಂದು ಮಧ್ಯಾಹ್ನ 12:55 ರ ಸುಮಾರಿಗೆ ವೈಟ್‍ಫೀಲ್ಡ್‍ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಲಾಗಿತ್ತು. ಘಟನೆ ನಡೆದ ಕೆಲ ದಿನಗಳ ಬಳಿಕ ಕೃತ್ಯ ಎಸಗಿದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್ ಅನ್ನು ಎನ್‍ಐಎ ಅಧಿಕಾರಿಗಳು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದರು. ಬಂಧಿತರ ವಿಚಾರಣೆ ನಡೆಸಿದ್ದು ಸಾಕಷ್ಟು ವಿಚಾರಗಳು ಬೆಳಕಿಗೆ ಬಂದಿತ್ತು.Sign in to your account
Username or Email Address


Password

 Remember Me


