ಬೆಂಗಳೂರು: ಕಳೆದೊಂದು ವರ್ಷದ ಈ ರಾಜ್ಯ ಸರ್ಕಾರ (Karnataka Government) ಸಾಧನೆ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B. Y. Vijayendra) ಅವರು ಆರೋಪಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ವರ್ಷದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿಲ್ಲ. ಗುದ್ದಲಿ ಪೂಜೆಯ ಉದಾಹರಣೆಯೂ ಇಲ್ಲ ಎಂದು ಅವರು ಕಿಡಿಕಾರಿದರು.ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕಾಂಗ್ರೆಸ್ (Congress) ನಾಯಕರು ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದರು. ಈ ಸರ್ಕಾರ ಬಂದ ಬಳಿಕ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಆಶಯ ಜನರದ್ದಾಗಿತ್ತು. ನುಡಿದಂತೆ ನಡೆಯುವ ಸರಕಾರ ಎಂದು ಕಾಂಗ್ರೆಸ್ಸಿಗರು ತಮ್ಮ ಬೆನ್ನನ್ನು ತಾವು ತಟ್ಟಿಕೊಳ್ಳುತ್ತಿದ್ದಾರೆ. ಹೊಗಳುಭಟರು, ಜಾಹೀರಾತಿನ ಮೂಲಕ ತಮ್ಮನ್ನು ತಾವು ಹೊಗಳಿಸಿಕೊಳ್ಳುವುದು ಮತ್ತು ಅಭಿವೃದ್ಧಿಯಾಗಿದೆ ಎಂದು ಬಿಂಬಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು.Live : ಪತ್ರಿಕಾಗೋಷ್ಠಿಉಪಸ್ಥಿತಿ : ರಾಜ್ಯಾಧ್ಯಕ್ಷರಾದ ಶ್ರೀ @BYVijayendra, ಪ್ರತಿಪಕ್ಷ ನಾಯಕರಾದ ಶ್ರೀ @RAshokaBJPಸ್ಥಳ : ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನ https://t.co/EMKS1IEp5q— BJP Karnataka (@BJP4Karnataka) May 20, 2024ರಾಜ್ಯದ ಕಾಂಗ್ರೆಸ್ ಸರಕಾರದ ಒಂದು ವರ್ಷದ ಸಾಧನೆ ಬಗ್ಗೆ ಮುಖ್ಯಮಂತ್ರಿಗಳು, ಸಚಿವರು ಮಾತನಾಡುತ್ತಿದ್ದಾರೆ. ಮತ್ತೊಂದು ಕಡೆ ಬಿಜೆಪಿ (BJP) ಜೊತೆ ಜೊತೆಗೆ ಈ ನಾಡಿನ ಜನಸಾಮಾನ್ಯರೂ ಸಹ ರಾಜ್ಯ ಸರಕಾರ ಕಳೆದ ಒಂದು ವರ್ಷದಲ್ಲಿ ಏನು ಸಾಧನೆ ಮಾಡಿದೆ ಎಂದು ಅನೇಕ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂದು ವಿಜಯೇಂದ್ರ ವಿಶ್ಲೇಷಿಸಿದರು.ಗ್ಯಾರಂಟಿಯೇ (Congress Guarantee) ಅಭಿವೃದ್ಧಿಯೇ ಎಂದು ಬಿಂಬಿಸಲಾಗುತ್ತಿದೆ. ಬರಗಾಲದ ವಿಚಾರದಲ್ಲಿ ಸರಕಾರದ ನಡವಳಿಕೆ ಅಕ್ಷಮ್ಯ ಅಪರಾಧ. ಕೇಂದ್ರ ಸರಕಾರದಿಂದ ಅನುದಾನ ಬಂದಿಲ್ಲ ಎಂದು ಹೋರಾಟ ಮಾಡಿದರು. ಆದರೆ, ಚುನಾಯಿತ ಸರಕಾರದ ಜವಾಬ್ದಾರಿ, ಮುಖ್ಯಮಂತ್ರಿಗಳ ಹೊಣೆಯನ್ನು ನಿಭಾಯಿಸುತ್ತಿದ್ದಾರೆ ಎಂದು ರೈತರಿಗೆ ಯಾವತ್ತೂ ಅನಿಸಿಲ್ಲ. ರಾಜ್ಯದಲ್ಲಿ 692ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ರಾಜ್ಯ ಸರಕಾರವು ಕೃಷಿ ಸಾಲ, ಬೆಳೆ ನಷ್ಟಕ್ಕೆ ಪರಿಹಾರ ಕೊಡುವ ನಿಟ್ಟಿನಲ್ಲಿ ಗಂಭೀರವಾದ ಅಥವಾ ಜವಾಬ್ದಾರಿಯುತ ಸರಕಾರವಾಗಿ ನಡೆದುಕೊಳ್ಳದೆ ಇರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.  ರೈತರ ಬಗೆಗಿನ ಸರಕಾರದ ಅಸಡ್ಡೆಯ ಧೋರಣೆ ಗೋಚರಿಸಿದೆ. ಸರಕಾರವು ಜವಾಬ್ದಾರಿಯುತವಾಗಿ ನಡೆದುಕೊಂಡಿದೆಯೇ? ತನ್ನ ಹೊಣೆ ನಿಭಾಯಿಸಿದೆಯೇ ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. ಹೈನುಗಾರಿಕೆ ಪ್ರೋತ್ಸಾಹಧನವನ್ನೂ 8-10 ತಿಂಗಳಿನಿಂದ ನೀಡಿಲ್ಲ. ಗ್ಯಾರಂಟಿಗಳ ಅನುಷ್ಠಾನದ ಆತುರದಲ್ಲಿ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಮರೆತಿದ್ದಾರೆ. ರಾಜ್ಯ ಸರಕಾರ ಆರ್ಥಿಕ ಸಂಕಷ್ಟದ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ರಾಜ್ಯಾದ್ಯಂತ ನೂರು ಶಾಲೆಗಳನ್ನು ತೆರೆಯುತ್ತೇವೆ: ಮಧು ಬಂಗಾರಪ್ಪಸಿಎಂ ಒಳಗೊಂಡಂತೆ ಸಚಿವರು ಕರ್ನಾಟಕ ಸರ್ಕಾರ ಕರ್ನಾಟಕದ ಅಭಿವೃದ್ಧಿ ದೇಶಕ್ಕೇ ಮಾದರಿ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಒಬ್ಬರು ಕಾಂಗ್ರೆಸ್ ನಾಯಕರು ಅಸಾಧ್ಯವಾದುದನ್ನು ನಾವು ಸಾಧಿಸಿ ತೋರಿಸಿದ್ದೇವೆ ಎನ್ನುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷನಾಗಿ ಈ ಸರಕಾರದ ವೈಫಲ್ಯಗಳನ್ನು ತೆರೆದಿಡುವುದು ನಮ್ಮ ಕರ್ತವ್ಯವೂ ಹೌದು ಎಂದು ನುಡಿದರು.ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ಮಾತನ್ನು ಕೇಳಿದರೆ, ಗ್ಯಾರಂಟಿಯೇ ಈ ರಾಜ್ಯದ ಅಭಿವೃದ್ಧಿ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಕಳೆದ ಒಂದು ವರ್ಷದಲ್ಲಿ ಗ್ಯಾರಂಟಿಗೆ ಪ್ರಚಾರ ಕೊಟ್ಟು, ಅದರ ಮೂಲಕ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಆಗಿದೆ ಎಂದು ಬಿಂಬಿಸುವ ಪ್ರಯತ್ನವನ್ನು ರಾಜ್ಯ ಸರಕಾರ ಮಾಡುತ್ತಿದೆ ಎಂದು ಟೀಕಿಸಿದರು.ಲೋಕಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ ಈ ಸರ್ಕಾರದ ಹಣೆಬರಹ ಗೊತ್ತಾಗಲಿದೆ. ಮೋದಿಜಿ ಅವರ ಮೋದಿ ಗ್ಯಾರಂಟಿ ಬಗ್ಗೆ ಜನತೆ ಭರವಸೆ ಇಟ್ಟು ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸರ್ಕಾರ ಅಭಿವೃದ್ಧಿಯ ಕಡೆ ಗಮನ ಕೊಡಬೇಕು. ಕಾನೂನು- ಸುವ್ಯವಸ್ಥೆ ಕಾಪಾಡಬೇಕು ಎಂದು ಆಗ್ರಹಿಸಿದರು. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ಉಪಸ್ಥಿತರಿದ್ದರು. Sign in to your account
Username or Email Address


Password

 Remember Me


