ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಇಂದಿನಿಂದ ಮುಂದಿನ 4 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ತುಮಕೂರು ಚಿಕ್ಕಮಗಳೂರು ಮತ್ತು ಕೊಡಗಿನ ಕೆಲವೆಡೆ ಭಾರೀ ಗಾಳಿಯೊಂದಿಗೆ (40-50 ಕಿಮೀ ವೇಗದಲ್ಲಿ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದಂತೆ ವಿಜಯಪುರ, ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 28-21
ಮಂಗಳೂರು: 29-25
ಶಿವಮೊಗ್ಗ: 29-23
ಬೆಳಗಾವಿ: 34-23
ಮೈಸೂರು: 29-22ಮಂಡ್ಯ: 29-22
ಮಡಿಕೇರಿ: 23-18
ರಾಮನಗರ: 29-22
ಹಾಸನ: 27-21
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-22ಕೋಲಾರ: 28-22
ತುಮಕೂರು: 29-22
ಉಡುಪಿ: 30-25
ಕಾರವಾರ: 32-27
ಚಿಕ್ಕಮಗಳೂರು: 25-19
ದಾವಣಗೆರೆ: 31-24ಹುಬ್ಬಳ್ಳಿ: 33-24
ಚಿತ್ರದುರ್ಗ: 30-22
ಹಾವೇರಿ: 32-24
ಬಳ್ಳಾರಿ: 33-26
ಗದಗ: 34-24
ಕೊಪ್ಪಳ: 33-25ರಾಯಚೂರು: 34-26
ಯಾದಗಿರಿ: 36-27
ವಿಜಯಪುರ: 37-26
ಬೀದರ್: 33-25
ಕಲಬುರಗಿ: 35-26
ಬಾಗಲಕೋಟೆ: 37-26






 Advertisement 




Sign in to your account
Username or Email Address


Password

 Remember Me


