ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಇಂದಿನಿಂದ ಮುಂದಿನ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.ಇಂದು ಹಾಗೂ ನಾಳೆ (ಮೇ 20) ಬೆಂಗಳೂರಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಆರೆಂಜ್ ಅಲರ್ಟ್ ಜಾರಿ ಮಾಡಿದೆ. ದಕ್ಷಿಣ ಒಳನಾಡಿನ ಕೆಲವೆಡೆ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಅದರಲ್ಲೂ ಮೈಸೂರು, ಮಂಡ್ಯ, ಕೋಲಾರದಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದೆ. ಇದರೊಂದಿಗೆ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಲಾಗಿದೆ.ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಗಾಳಿಯೊಂದಿಗೆ (40-50 ಕಿ.ಮೀ ವೇಗ) ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಜಿಲ್ಲೆಗಳ ಕೆಲವೆಡೆ ಭಾರೀ ಗಾಳಿಯೊಂದಿಗೆ (40-50 ಕಿ.ಮೀ ವೇಗ) ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 28-21
ಮಂಗಳೂರು: 30-25
ಶಿವಮೊಗ್ಗ: 29-23
ಬೆಳಗಾವಿ: 34-23
ಮೈಸೂರು: 29-22ಮಂಡ್ಯ: 29-22
ಮಡಿಕೇರಿ: 23-18
ರಾಮನಗರ: 29-22
ಹಾಸನ: 27-21
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-22ಕೋಲಾರ: 28-22
ತುಮಕೂರು: 29-22
ಉಡುಪಿ: 30-25
ಕಾರವಾರ: 32-27
ಚಿಕ್ಕಮಗಳೂರು: 25-19
ದಾವಣಗೆರೆ: 31-24ಹುಬ್ಬಳ್ಳಿ: 33-24
ಚಿತ್ರದುರ್ಗ: 30-22
ಹಾವೇರಿ: 32-24
ಬಳ್ಳಾರಿ: 33-26
ಗದಗ: 34-24
ಕೊಪ್ಪಳ: 33-25ರಾಯಚೂರು: 34-26
ಯಾದಗಿರಿ: 36-27
ವಿಜಯಪುರ: 37-26
ಬೀದರ್: 33-25
ಕಲಬುರಗಿ: 35-26
ಬಾಗಲಕೋಟೆ: 37-26






 Advertisement 




Sign in to your account
Username or Email Address


Password

 Remember Me


