ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಭೀಕರ ಕೊಲೆ ಘಟನೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ (Hubballi) ಮತ್ತೊಂದು ಯುವತಿಯ ಬರ್ಬರ ಹತ್ಯೆಯಾಗಿದೆ. ಆಟೋದಲ್ಲಿ ಬಂದ ಹಂತಕ ಯುವತಿ ಅಂಜಲಿ ಅಂಬಿಗೇರಳನ್ನು ಕೊಲೆ ಮಾಡಿದ್ದಾರೆ.ಹಂತಕ ವಿಶ್ವ ಆಟೋದಲ್ಲಿ ಬಂದು ಇಳಿಯುತ್ತಿರುವ ದೃಶ್ಯ ಸ್ಥಳೀಯ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ. ಆಟೋದಿಂದ ಇಳಿದು 2 ನಿಮಿಷದಲ್ಲೇ ಕೊಲೆಗೈಯ್ದು ಬಳಿಕ ಹುಬ್ಬಳ್ಳಿ ಹೊಸ ಬಸ್ ನಿಲ್ದಾಣಕ್ಕೆ ಬಂದು ಅಲ್ಲಿಂದ ತಲೆಮರೆಸಿಕೊಂಡಿದ್ದಾನೆ. ಈ ದೃಶ್ಯ ಬಸ್ ನಿಲ್ದಾಣ ಇರುವ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವೀಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಸಹೋದರಿಯರ ಮುಂದೆಯೇ ಯುವತಿಯ ಭೀಕರ ಹತ್ಯೆ – ಸಹಪಾಠಿಯಿಂದಲೇ ಕೃತ್ಯಪ್ರಕರಣದ ವಿವರ: ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ (21) ಮನೆಯಿದೆ. ಅಂಜಲಿ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಗಿರೀಶ್ ಅಲಿಯಾಸ್ ವಿಶ್ವ ಏಕಾಏಕಿ ಮನೆಗೆ ಎಮಟ್ರಿ ಕೊಟ್ಟಿದ್ದಾನೆ. ಅಲ್ಲದೆ ಅಜ್ಜಿ ಮತ್ತು ಇಬ್ಬರು ಸಹೋದರಿಯರ ಮುಂದೆಯೇ ಅಂಜಲಿಯನ್ನು ಮನೆ ತುಂಬೆಲ್ಲಾ ಎಳೆದಾಡಿ ಚಾಕುವಿನಿಂದ ಚುಚ್ಚಿ ಭೀಕರ ಹತ್ಯೆಗೈದಿದ್ದಾನೆ.ಮೊದಲಿಗೆ ಮನೆಯ ಪಡಸಾಲೆಯಲ್ಲಿ ಅಂಜಲಿಗೆ ಚಾಕು ಹಾಕಿ, ಬಳಿಕ ಕುತ್ತಿಗೆ ಹಿಡಿದು ಗೋಡೆಯತ್ತ ಎಳೆದುಕೊಂಡು ಹೋಗಿ ಹೊಟ್ಟೆ ಭಾಗಕ್ಕೆ ಚಾಕು ಹಾಕಿದ್ದಾನೆ. ಅಷ್ಟಕ್ಕೇ ತೃಪ್ತಿಯಾಗದೇ ಅಲ್ಲಿಂದ ಅಡುಗೆ ಮನೆಗೆ ಎಳೆದೊಯ್ದು ಮನ ಬಂದಂತೆ ಚಾಕುವಿನಿಂದ ಚುಚ್ಚಿ ಅಂಜಲಿ ಕೊನೆಯುಸಿರೆಳೆದ ಬಳಿಕವೇ ಅಲ್ಲಿಂದ ಕಾಲ್ಕಿತ್ತಿದ್ದಾನೆ.Sign in to your account
Username or Email Address


Password

 Remember Me


