ಮಂಗಳೂರು: ಐಸಿಸ್ (ISIS) ನಂಟು ಪ್ರಕರಣದಲ್ಲಿ ಎನ್ ಐಎಯಿಂದ ಬಂಧನಕ್ಕೊಳಗಾಗಿದ್ದ ಉಳ್ಳಾಲದ ಮಾಜಿ ಶಾಸಕ ದಿ. ಇದಿನಬ್ಬರವರ ಮೊಮ್ಮಗ ಅಮ್ಮರ್ ಅಬ್ದುಲ್ ರೆಹಮಾನ್ ಗೆ ದೆಹಲಿ ಹೈಕೋರ್ಟ್ (Delhi Highcourt) ಜಾಮೀನು ನೀಡಿದೆ.2021 ರ ಆಗಸ್ಟ್ 21 ರಂದು ಬಂಧನಕ್ಕೊಳಗಾಗಿದ್ದ ರೆಹಮಾನ್ ಮೊಬೈಲ್ ನಲ್ಲಿ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳಿಗೆ ಐಸಿಸ್ ಪರವಾದ  ಬಾವುಟ, ಕರಪತ್ರ ವೀಡಿಯೋಗಳು ಸಿಕ್ಕಿದ್ದವು. ಇದನ್ನು ಕೋರ್ಟ್‍ಗೂ ನೀಡಲಾಗಿತ್ತು. ಈ ನಡುವೆ ಬಂಧನ ಪ್ರಶ್ನಿಸಿ ವಿಚಾರಣಾಧೀನ ಕೋರ್ಟ್ ನಲ್ಲಿ ರೆಹಮಾನ್ ಜಾಮೀನು ಅರ್ಜಿ ಸಲ್ಲಿಸಿದ್ದು, ಕೋರ್ಟ್ ಜಾಮೀನು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇದೀಗ ಸುದೀರ್ಘ ವಿಚಾರಣೆ ಬಳಿಕ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ.ಜಾಮೀನು ಆದೇಶದಲ್ಲಿ ಹಲವು ಅಂಶಗಳನ್ನು ದೆಹಲಿ ಹೈಕೋರ್ಟ್ ಉಲ್ಲೇಖಿಸಿದ್ದು, ಉಗ್ರ ಸಂಘಟನೆ ಜೊತೆಗಿನ ಆಕರ್ಷಣೆಯನ್ನು ಉಗ್ರ ನಂಟು ಎನ್ನಲು ಆಗಲ್ಲ. ಐಸಿಸ್ ಬಾವುಟ, ಕರಪತ್ರ ಮೊಬೈಲ್ ನಲ್ಲಿದ್ದರೆ ಉಗ್ರ ಎನ್ನಲು ಪೂರಕ ಸಾಕ್ಷ್ಯವಲ್ಲ. ಇವುಗಳೆಲ್ಲ ಇಂದಿನ ಡಿಜಿಟಲ್ ಯುಗದಲ್ಲಿ ಇಂಟರ್ ನೆಟ್ ನಲ್ಲಿ ಸಿಗುತ್ತದೆ. ಕುತೂಹಲ ಇರೋ ಯಾರು ಬೇಕಾದರೂ ಮೊಬೈಲ್, ಕಂಪ್ಯೂಟರ್ ನಲ್ಲಿ ಡೌನ್ ಲೋಡ್ ಮಾಡಬಹುದು. ಹಾಗಾಗಿ ಇದನ್ನ ಇಟ್ಟು ಕೊಂಡವರನ್ನ ಐಸಿಸ್ ನಂಟನ್ನ ಸಾಬೀತುಪಡಿಸಲು ಆಗಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇದನ್ನೂ ಓದಿ: ಕೈಬೆರಳಿನ ಶಸ್ತ್ರಚಿಕಿತ್ಸೆಗೆ ಕರೆದೊಯ್ದು ನಾಲಿಗೆಗೆ ಸರ್ಜರಿ ಮಾಡಿದ್ರು!- ತನಿಖೆಗೆ ಆದೇಶSign in to your account
Username or Email Address


Password

 Remember Me


