ಬೆಂಗಳೂರು: ಕಾಲೇಜಿನ ಐದನೇ ಮಹಡಿಯಿಂದ ವಿದ್ಯಾರ್ಥಿಯೊಬ್ಬ‌ (Student) ಜಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ (Electronic City) ಸಮೀಪದ ಕಾಲೇಜಿನಲ್ಲಿ ನಡೆದಿದೆ.ಕರಸಾಲ ರಾಹುಲ್ (21) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಈತ ಕಂಪ್ಯೂಟರ್ ಸೈನ್ಸ್ ವಿಭಾಗದ ಐದನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ. ಸೋಮವಾರ ಕಾಲೇಜಿನಲ್ಲಿ ಪರೀಕ್ಷೆ ನಡೆದಿದ್ದು, ಈ ಸಮಯದಲ್ಲಿ ಕಾಲೇಜಿಗೆ ತಡವಾಗಿ ಬಂದಿದ್ದ. ಇದೇ ವಿಚಾರವಾಗಿ ಕಾಲೇಜಿನಲ್ಲಿ ವಿದ್ಯಾರ್ಥಿಯನ್ನು ನಿಂದಿಸಿರುವ ಶಂಕೆ ವ್ಯಕ್ತವಾಗಿದೆ. ಇದರಿಂದಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಇದನ್ನೂ ಓದಿ: ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ ಪ್ರಮಾಣ ಪತ್ರ ಹಸ್ತಾಂತರರಾಹುಲ್ ಮೂಲತಃ ಆಂಧ್ರಪ್ರದೇಶ ಕರ್ನೂಲ್ ಮೂಲದ ದಂಪತಿಗಳ ಕುಟುಂಬದಿಂದ ಬಂದಿದ್ದು, ಕೆಲ ವರ್ಷಗಳಿಂದ ವಿದ್ಯಾಭ್ಯಾಸಕ್ಕಾಗಿ ಕಾಲೇಜು ಹಾಸ್ಟೆಲ್‌ನಲ್ಲಿ ಇದ್ದ ಎನ್ನಲಾಗುತ್ತಿದೆ. ಸದ್ಯ ಪರಪ್ಪನ ಅಗ್ರಹಾರ ಪೊಲೀಸರು ಪ್ರಕರಣ ದಾಖಲಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದ ನವಜೋಡಿ ನೇಣಿಗೆ ಶರಣು


 Advertisement 







 Advertisement 




Sign in to your account
Username or Email Address


Password

 Remember Me


