ಬೆಂಗಳೂರು: ಮಹಾರಾಷ್ಟ್ರ (Maharashtra) ಸರ್ಕಾರ ಎಲೆಕ್ಷನ್ ಬಳಿಕ ಪತನ ಆಗಬಹುದು. ಕಾಂಗ್ರೆಸ್ (Congress) ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಏಕನಾಥ ಶಿಂಧೆಗೆ ಟಾಂಗ್ ನೀಡಿದ್ದಾರೆ.ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗುತ್ತೆ ಎಂಬ ಏಕನಾಥ ಶಿಂಧೆ (Eknath Shinde) ಹೇಳಿಕೆ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರ ಸರ್ಕಾರದ ಬಗ್ಗೆ ಅವರಿಗೆ ಅನಮಾನವಿದೆ. ಎಲೆಕ್ಷನ್ ಆದ ಬಳಿಕ ರಾಜ್ಯದಲ್ಲಿ ಯಾವುದೇ ಭಯವಿಲ್ಲ. ಮಹಾರಾಷ್ಟ್ರ ಸರ್ಕಾರ ಉಳಿಯುತ್ತಾ ಎಂನ ಅನುಮಾನವಿದೆ. ಅಲ್ಲಿ ಶಾಸಕರು ಯೂಟರ್ನ್ ಹೊಡೆಯುತ್ತಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಅಲ್ಲಿ ನಮ್ಮ ಪಕ್ಷದ ಸರ್ಕಾರ ಬರಲಿದೆ. ಅಲ್ಲಿ ಮೈತ್ರಿ ಸರ್ಕಾರ ಬರಲಿದೆ. ಎನ್‌ಸಿಪಿ, ಶಿವಸೇನೆಯ ಶಾಸಕರು ವಾಪಸ್ ಆಗುತ್ತಿದ್ದಾರೆ. ಅದಕ್ಕೆ ಅಲ್ಲಿ ಸರ್ಕಾರ ಬದಲಾವಣೆ ಆಗಲಿದೆ. ನಮ್ಮ ಸರ್ಕಾರದಲ್ಲಿ ಯಾವುದೇ ಶಿಂಧೆ ಇಲ್ಲ. ನಮಗೆ ಯಾವ ಭಯ ಇಲ್ಲ. ಮಹಾರಾಷ್ಟ್ರದಲ್ಲಿ ಪಾರ್ಲಿಮೆಂಟ್ ಚುನಾವಣೆ ಬಳಿಕ ನಮ್ಮ ಸರ್ಕಾರ ಬರುತ್ತೆ ಎಂದರು. ಇದನ್ನೂ ಓದಿ: 400 ಸ್ಥಾನಗಳನ್ನು ಗೆಲ್ಲುವ ಗುರಿ ಕೇವಲ ಘೋಷಣೆಯಲ್ಲ, ವಾಸ್ತವದಲ್ಲೂ ಅದು ನಿಜವಾಗುತ್ತೆ: ಮೋದಿಎರಡು ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಿದ್ದೇವೆ. 6 ಜನ ಒಳ್ಳೆಯ ಅಭ್ಯರ್ಥಿಗಳನ್ನು ಹಾಕಿದ್ದೇವೆ. ಆರು ಕ್ಷೇತ್ರಗಳನ್ನು ಗೆಲ್ಲುತ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಪದವೀಧರರ ಸಮಸ್ಯೆಗಳನ್ನು ಅರಿತಿದ್ದೇವೆ. ಅವರ ಬದುಕಿನ ಬಗ್ಗೆ ವೃತ್ತಿಯ ಬಗ್ಗೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಅವರಿಗೆ ಕೆಲಸ ಆಗಬೇಕು. ಕೆಲಸದ ಜವಾಬ್ದಾರಿ ನಮ್ಮದು. ಯುವಕರು, ನಿರುದ್ಯೋಗಿಗಳಿಗೆ ಸಹಕರಿಸಿದ್ದೇವೆ. ಬಿಜೆಪಿಯವರು ಏನೂ ಕೊಟ್ಟಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ವೀಡಿಯೋ ನೋಡಿದವರೆಲ್ಲ ತಪ್ಪಿತಸ್ಥರು ಅಂದ್ರೆ ಹಾಸನದ 15 ಲಕ್ಷ ಜನ ತಪ್ಪಿತಸ್ಥರಾಗ್ತಾರೆ: ಪ್ರೀತಂಗೌಡ


 Advertisement 







 Advertisement 




Sign in to your account
Username or Email Address


Password

 Remember Me


