ಕೋಲಾರ: ಹೆಣ್ಣು ಮಗುವೆಂದು ಭಾವಿಸಿ, ಮಾತ್ರೆ ಸೇವಿಸಿ ಗಂಡು ಮಗುವಿನ ಗರ್ಭಪಾತವಾದ ಘಟನೆ ಕೋಲಾರ (Kolar) ಜಿಲ್ಲೆಯ ಮಾಲೂರು ನಗರದಲ್ಲಿ ನಡೆದಿದೆ.ಕೆಜಿಎಫ್ ತಾಲೂಕಿನ ಆಡಂಪಲ್ಲಿ ನಿವಾಸಿ ಮುರುಗೇಶ್ ಹಾಗೂ ಅನಿತಾ ದಂಪತಿಯ 3 ತಿಂಗಳ ಮಗು ಮೃತಪಟ್ಟಿದೆ.ನಡೆದಿದ್ದೇನು..?: ಕಳೆದ ಸೋಮವಾರ ದಂಪತಿ ಮಾಲೂರು ನಗರದ ಸಂಜನಾ ಖಾಸಗಿ ಆಸ್ಪತ್ರೆಗೆ ಸ್ಕ್ಯಾನಿಂಗ್ ಗೆಂದು ತೆರಳಿದ್ದರು. ಈ ಹಿಂದಿನ 2 ಮಕ್ಕಳು ಹೆಣ್ಣಾಗಿದ್ದು, ಮೂರನೇಯದ್ದು ಗಂಡು ಮಗುವಾಗಲಿ ಎಂದು ದಂಪತಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಹೊಟ್ಟೆಯಲ್ಲಿರುವ ಹೆಣ್ಣು ಮಗುವನ್ನು ಗಂಡಾಗಿ ಪರಿವರ್ತನೆ ಮಾಡಿಸುವುದಾಗಿ ಹೇಳಿ ವೈದ್ಯರು ಮಾತ್ರೆಗಳನ್ನು ಕೊಟ್ಟಿದ್ದಾರೆ ಎಂದು ಇದೀಗ ಪೋಷಕರು ಆರೋಪ ಮಾಡುತ್ತಿದ್ದಾರೆ.ಹೆಣ್ಣು ಮಗುವೆಂದು ಸುಳ್ಳು ಹೇಳಿ 25 ಸಾವಿರ ಹಣ ಪಡೆದು ವಂಚಿಸಿದ್ದಾರೆಂದು ತಂದೆ ಮುರುಗೇಶ್ ಆರೋಪ ಮಾಡಿದ್ದಾರೆ. ಇತ್ತ ಆಸ್ಪತ್ರೆ ಸಿಬ್ಬಂದಿ ಹಾಗೂ ವೈದ್ಯರು, ನಾವು ಗರ್ಭಪಾತಕ್ಕೆ ಮಾತ್ರೆ ಕೊಟ್ಟೆ ಇಲ್ಲ ಎಂದು ಹೇಳುತ್ತಿದ್ದಾರೆ. ಇದನ್ನೂ ಓದಿ: ಕೆಎಎಸ್ ಅಧಿಕಾರಿಯ ಪತ್ನಿ, ಹೈಕೋರ್ಟ್ ವಕೀಲೆ ಆತ್ಮಹತ್ಯೆ – ಕಾರಣ ನಿಗೂಢ!ಆಸ್ಪತ್ರೆಯಲ್ಲಿ ಭ್ರೂಣ ಲಿಂಗದ ಸ್ಕ್ಯಾನಿಂಗ್ ಮಾಡಿಸಿ ಸಾವಿರಾರು ಹಣ ಪೀಕುತ್ತಿರುವ ಆರೋಪ ಕೂಡ ಕೇಳಿಬಂದಿದೆ. ಹೀಗಾಗಿ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಾಲೂರು ತಾಲೂಕು ವೈದ್ಯಾದಿಕಾರಿಗೆ ಮುರುಗೇಶ್ ದೂರು ನೀಡಿದ್ದಾರೆ. ಈ ಬೆನ್ನಲ್ಲೇ ಸ್ಕ್ಯಾನಿಂಗ್ ಸೆಂಟರ್ ಸೀಜ್ ಮಾಡಲಾಗಿದೆ. ಡಿಹೆಚ್‍ಓ ಜಗದೀಶ್ ನೇತೃತ್ವದಲ್ಲಿ ಮಾಲೂರು ಪಟ್ಟಣದ ಸಂಜನಾ ಆಸ್ಪತ್ರೆ ಸ್ಕ್ಯಾನಿಂಗ್ ಸೆಂಟರ್ ಸೀಜ್ ಮಾಡಲಾಗಿದೆ.ಘಟನೆ ಸಂಬಂಧ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


