ಹಾಸನ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರಿಗೆ ಸಂಬಂಧಿಸಿದ್ದು ಎನ್ನಲಾದ ಪೆನ್‌ಡ್ರೈವ್‌ ವೈರಲ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ (Preetham Gowda) ಆಪ್ತ ಸೇರಿದಂತೆ ಇಬ್ಬರನ್ನು ಎಸ್‌ಐಟಿ ವಶಕ್ಕೆ ಪಡೆದಿದೆ.ಪೆನ್‌ಡ್ರೈವ್ ವೈರಲ್ ವಿಚಾರದಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅತ್ಯಾಪ್ತ ಲಿಖಿತ್‌ಗೌಡ ಹಾಗೂ ಯಲಗುಂದ ಚೇತನ್ ಎಂಬ ಇಬ್ಬರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ವಕೀಲ ದೇವರಾಜೇಗೌಡಗೆ ಮೇ 24 ರವರೆಗೆ ನ್ಯಾಯಾಂಗ ಬಂಧನಇಬ್ಬರನ್ನೂ ನಿನ್ನೆ ಮಧ್ಯರಾತ್ರಿಯೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರೀತಂಗೌಡ ಜೊತೆ ಚೇತನ್ ಹಾಗೂ ಲಿಖಿತ್ ಗುರುತಿಸಿಕೊಂಡಿದ್ದರು. ಮಾಜಿ ಶಾಸಕ ಪ್ರೀತಂ ಗೌಡ ಕಚೇರಿಯ ಸಿಬ್ಬಂದಿ ಹಾಗೂ ಅವರ ಆಪ್ತ ನಿಖಿತ್ ಎನ್ನಲಾಗಿದೆ.ಪೆನ್‌ಡ್ರೈವ್ ಇಟ್ಟುಕೊಂಡಿದ್ದ ಆರೋಪದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಲಿಖಿತ್ ಎಂಬಾತ ಪ್ರೀತಂ ಗೌಡ ಜೊತೆ ಹಲವು ವರ್ಷಗಳಿಂದ ಗುರುತಿಸಿಕೊಂಡಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬಿಜೆಪಿ ಮುಖಂಡ, ವಕೀಲ ದೇವರಾಜೇ ಗೌಡ ಬಂಧನಹಾಸನದ ನಗರ ಪೊಲೀಸ್ ಠಾಣೆ ಸಮಚ್ಚಯದಲ್ಲಿರುವ ಸೈಬರ್ ಕ್ರೈಂ ಠಾಣೆಯಲ್ಲಿ ಇಬ್ಬರ ವಿಚಾರಣೆ ನಡೆಸಲಾಗುತ್ತಿದೆ. ಬಿಜೆಪಿ ಕಾರ್ಯಕರ್ತರ ಬಂದನ ತೀವ್ರ ಕುತೂಹಲ ಮೂಡಿಸಿದೆ.Sign in to your account
Username or Email Address


Password

 Remember Me


