ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು (G Devarajegowda) ಹಿರಿಯೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಹೊಳೆನರಸೀಪುರ ಪೊಲೀಸರ ಮಾಹಿತಿ ಮೇರೆಗೆ ಹಿರಿಯೂರು ಪೊಲೀಸರು ಚಿತ್ರದುರ್ಗ (Chitradurga) ಜಿಲ್ಲೆ ಹಿರಿಯೂರು (Hiriyuru) ತಾಲೂಕಿನ ಗುಯಿಲಾಳ್ ಟೋಲ್ ಬಳಿ ದೇವರಾಜೇಗೌಡರನ್ನು ವಶಕ್ಕೆ ಪಡೆದಿದ್ದಾರೆ. ಪ್ರಜ್ವಲ್ ರೇವಣ್ಣ (Prajwal Revanna) ಪೆನ್‌ಡ್ರೈವ್ ಪ್ರಕರಣದಲ್ಲಿ (Pendrive Case) ದೇವರಾಜೇಗೌಡ ಬ್ಯಾಗ್ ಸಮೇತ ಇನ್ನೋವಾ ಕಾರಿನಲ್ಲಿ ಎಸ್ಕೇಪ್ ಆಗಲು ಯತ್ನಿಸಿದ್ದರು. ಈ ವೇಳೆ ಹಿರಿಯೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೋವಾ ಕಾರಿನಲ್ಲೇ ದೇವರಾಜೇಗೌಡ ತಮ್ಮ ಮೊಬೈಲ್ ಅನ್ನು ಬಿಟ್ಟಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅಬ್ಬರ; ಮನೆಗಳಿಗೆ ನುಗ್ಗಿದ ನೀರುಹಿರಿಯೂರು ಗ್ರಾಮಾಂತರ ಠಾಣೆ ಸಿಪಿಐ ಕಾಳಿಕೃಷ್ಣ ನೇತೃತ್ವದಲ್ಲಿ ದೇವರಾಜೇಗೌಡರನ್ನು ವಶಕ್ಕೆ ಪಡೆದಿದ್ದು, ಬಳಿಕ ಎಸ್‌ಐ ಅರುಣ್ ನೇತೃತ್ವದಲ್ಲಿ ಹಾಸನ ಪೊಲೀಸರು ದೇವರಾಜೇಗೌಡರನ್ನು ವಶಕ್ಕೆ ಪಡೆದು ಹೊಳೆನರಸೀಪುರಕ್ಕೆ ಕರೆದೊಯ್ದಿದ್ದಾರೆ. ಅರಕಲಗೂಡು, ಹಳ್ಳಿಮೈಸೂರು ಹಾಗೂ ಬಾಣಾವರ ಪಿಎಸ್‌ಐಗಳು ದೇವರಾಜೇಗೌಡರನ್ನು ಕರೆತಂದು ಹೊಳೆನರಸೀಪುರದ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಇರಿಸಿದ್ದಾರೆ. ವಿಚಾರಣೆ ಬಳಿಕ ಇಂದು ಸಂಜೆಯೊಳಗೆ ದೇವರಾಜೇಗೌಡರನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅಬ್ಬರ; ಮನೆಗಳಿಗೆ ನುಗ್ಗಿದ ನೀರು


 Advertisement 







 Advertisement 




Sign in to your account
Username or Email Address


Password

 Remember Me


