ಬೆಂಗಳೂರು: ಕರ್ನಾಟಕ (Karnataka) ಬಿಜೆಪಿ ಸಾಮಾಜಿಕ ಜಾಲತಾಣ (BJP IT Cell) ಸಂಚಾಲಕ ಪ್ರಶಾಂತ್‌ ಮಾಕನೂರು (Convener) ಅವರನ್ನು ಹೈಗ್ರೌಂಡ್ಸ್‌ ಪೊಲೀಸರು ಬಂಧಿಸಿ ಬಳಿಕ ನಿರೀಕ್ಷಣಾ ಜಾಮೀನು ಪಡೆದಿದ್ದ ಅವರನ್ನು ಬಿಡುಗಡೆ ಮಾಡಲಾಗಿದೆ.ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಮೇಶ್‌ ಬಾಬು ಅವರು ಮೇ 4 ರಂದು ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಮಾಕನೂರು ಅವರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣಾ ಪ್ರಚಾರದ ಹಕ್ಕು ಮೂಲಭೂತವಲ್ಲ- ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪಜನ ಪ್ರತಿನಿಧಿಗಳ ಕಾಯ್ದೆ ಹಾಗೂ ಸೆಕ್ಷನ್ 505 (2) (ವರ್ಗಗಳ ನಡುವೆ ದ್ವೇಷ, ದ್ವೇಷ ಅಥವಾ ದುಶ್ಚಟವನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು) ಅಡಿಯಲ್ಲಿ ಮೂವರು ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಫೋರ್ಟ್ ಸಿಟಿ ರೀಲ್ಸ್ ಸ್ಟಾರ್ ಗೀತಾಶ್ರೀ ನಿಗೂಢ ಸಾವು – ಪತಿ ಪರಾರಿಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ (JP Nadda), ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra), ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ (Amit Malviya) ಅವರಿಗೆ ಬೆಂಗಳೂರು ಪೊಲೀಸರು ಬುಧವಾರ ಸಮನ್ಸ್ ಜಾರಿ ಮಾಡಿದ್ದರು.  ನೋಟಿಸ್ ತಲುಪಿದ 7 ದಿನಗಳ ಒಳಗಾಗಿ ಬೆಳಗ್ಗೆ 11 ಗಂಟೆ ವೇಳೆಗೆ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ (High Grounds Police Station) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ನಲ್ಲಿ ಸೂಚಿಸಲಾಗಿದೆ. Sign in to your account
Username or Email Address


Password

 Remember Me


