ಬೆಂಗಳೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಮತ್ತು ವಕೀಲ ದೇವರಾಜೇಗೌಡ (Devarajegowda) ವಿರುದ್ಧ ವಿಶೇಷ ತನಿಖಾ ತಂಡಕ್ಕೆ (SIT) ಕಾಂಗ್ರೆಸ್‌ ದೂರು ನೀಡಿದೆ.ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಪ್ರಕಾಶ್‌ (Prakash) ಅವರು ಮಾಧ್ಯಮಗಳ ಬಂದ ವರದಿಯನ್ನು ಆಧಾರಿಸಿ ದೂರು ನೀಡಿದ್ದಾರೆ. ಇದನ್ನೂ ಓದಿ: ಅವಿವಾಹಿತ ಅತಿಥಿ ಉಪನ್ಯಾಸಕಿ ನೇಣಿಗೆ ಶರಣು ದೂರಿನಲ್ಲಿ ಏನಿದೆ?
ದೇವರಾಜೇಗೌಡ ಹಾಗೂ ಕುಮಾರಸ್ವಾಮಿ ಅವರು ಎಸ್‌ಐಟಿ ವಿರುದ್ಧ ಹೇಳಿಕೆ ನೀಡುವ ಮೂಲಕ ತನಿಖೆಯ ದಾರಿಯನ್ನು ತಪ್ಪಿಸಿ ಪರೋಕ್ಷವಾಗಿ ಆರೋಪಿಗಳ ರಕ್ಷಣೆಗೆ ನಿಂತಿದ್ದಾರೆ.ಕುಮಾರಸ್ವಾಮಿ ಅವರಿಗೆ ಪ್ರಜ್ವಲ್ ರೇವಣ್ಣ ಅತ್ಯಾಚಾರದ ಬಗ್ಗೆ ತಿಳಿದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸಂತ್ರಸ್ತೆಯರು ಕೆಕೆ. ಗೆಸ್ಟ್ ಹೌಸ್ ನಲ್ಲಿ ಇದ್ದಾರೆಂದು ಹೇಳಿಕೆ ಕೊಡುವ ಮೂಲಕ ಸಂತ್ರಸ್ತೆ ಬಗ್ಗೆ ಮಾಹಿತಿ ಕೊಡುವ ಕೆಲಸ ಮಾಡುತ್ತಿದ್ದಾರೆದೇವರಾಜೇಗೌಡ ಮತ್ತು ಕುಮಾರಸ್ವಾಮಿ ಅವರು ಮಹಿಳೆಯರ ಅಶ್ಲೀಲ ಚಿತ್ರಗಳನ್ನು ಚಿತ್ರೀಕರಿಸಿಕೊಂಡಿರುವ ಆರೋಪಿ ವಿರುದ್ಧ ದೂರು ನೀಡದೇ ವಿಡಿಯೋ ಹಂಚಿರುವ ವ್ಯಕ್ತಿಗಳನ್ನು ಮಾತ್ರ ಗುರುತಿಸಿ ಕ್ರಮ ಕೈಗೊಳ್ಳಲು ಆಗ್ರಹಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. Sign in to your account
Username or Email Address


Password

 Remember Me


