ಬಾಗಲಕೋಟೆ: ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆಗಿರುವ ಬಾಗಲಕೋಟೆ (Bagalkote) ಜಿಲ್ಲೆಯ ಅಂಕಿತಾ ಬಸಪ್ಪ ಕೊಣ್ಣುರ್ (Ankita Basappa Konnur) ಅವರ ಸಾಧನೆಗೆ ಜಿಲ್ಲಾ ಪಂಚಾಯಿತಿ ಸಿಇಓ (Zilla Panchayat CEO) ಶಶಿಧರ ಕುರೇರ್ ಅಭಿನಂದನೆ ಸಲ್ಲಿಸಿದ್ದಾರೆ.ಈ ಬಗ್ಗೆ ದೂರವಾಣಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿಇಓ ಕುರೇರ್, ಇಡೀ ರಾಜ್ಯವೇ ಖುಷಿ ಪಡುವ ಸಾಧನೆಯನ್ನು ನಮ್ಮ ಜಿಲ್ಲೆಯ ಅಂಕಿತಾ ಕೊಣ್ಣುರ್ ಮಾಡಿದ್ದಾರೆ. ಸಣ್ಣ ರೈತ ಕುಟುಂಬದ ಅಂಕಿತಾ, ಸರ್ಕಾರಿ ಶಾಲೆಯಲ್ಲಿ ಓದಿ, ರಾಜ್ಯದ ಎಲ್ಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೂ ಮಾದರಿ ಆಗುವ ಸಾಧನೆ ಮಾಡಿದ್ದಾರೆ. ಬಾಲಕಿಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: SSLC Result 2024; ಬಾಗಲಕೋಟೆಯ ಅಂಕಿತಾ ಬಸಪ್ಪ ರಾಜ್ಯಕ್ಕೆ ಟಾಪರ್ಹಾಗೆಯೇ ಬಾಗಲಕೋಟೆ ಜಿಲ್ಲೆ ಕಳೆದ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯದಲ್ಲಿ 24ನೇ ಸ್ಥಾನ ಪಡೆದಿತ್ತು. ಈ ಬಾರಿ 13ನೇ ಸ್ಥಾನಕ್ಕೆ ಬಂದಿದೆ. 11 ಸ್ಥಾನ ಪ್ರಗತಿಯಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು, ಇಲಾಖೆ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: SSLC Result: 73.40 % ಫಲಿತಾಂಶ – ಬಾಲಕಿಯರೇ ಮೇಲುಗೈ; ಉಡುಪಿಗೆ ಮೊದಲ ಸ್ಥಾನ


 Advertisement 







 Advertisement 




Sign in to your account
Username or Email Address


Password

 Remember Me


