ಬೆಂಗಳೂರು: ಮನೆಗೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಕಿಡ್ನ್ಯಾಪ್ ಆರೋಪ ಪ್ರಕರಣದಲ್ಲಿ ಎಸ್‌ಐಟಿ ವಶದಲ್ಲಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna) ಅವರ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದೆ. ಆರೋಪಿಗೆ ನ್ಯಾಯಾಲಯದಲ್ಲಿ ಅವರಿಗೆ ಜಾಮೀನು ಸಿಗುತ್ತದೆಯೇ ಅಥವಾ ಜೈಲಿಗೆ ಹೋಗ್ತಾರೆಯೇ ಎಂಬುದು ನಿರ್ಧಾರವಾಗಲಿದೆ.ದೌರ್ಜನ್ಯ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ರೇವಣ್ಣರ ಹೆಚ್ಚಿನ ವಿಚಾರಣೆ ಅವಶ್ಯಕತೆ ಇದೆ ಎಂದು ಎಸ್‌ಐಟಿ (SIT) ಅಧಿಕಾರಿಗಳು ನಾಲ್ಕು ದಿನ ಕಸ್ಟಡಿಗೆ ಪಡೆದಿದ್ದರು. ಇಂದು ಆರೋಪಿ ರೇವಣ್ಣ ಅವರ ಎಸ್‌ಐಟಿ ಕಸ್ಟಡಿ ಅಂತ್ಯವಾಗಲಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಇದನ್ನೂ ಓದಿ: ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣ- ಡಿಕೆಶಿ ವಿರುದ್ಧ ಜೆಡಿಎಸ್ ಪ್ರತಿಭಟನೆಜಾಮೀನು ತೀರ್ಪು ಆರೋಪಿ ಪರ ಬಂದರೆ ರೇವಣ್ಣ ಮನೆಗೆ ಹೋಗುತ್ತಾರೆ. ಜಾಮೀನು ಸಿಗದೇ ಹೋದರೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಲಿದ್ದಾರೆ. ಬಹುತೇಕ ಕಿಡ್ನ್ಯಾಪ್ ಕೇಸ್‌ನಲ್ಲಿ ವಿಚಾರಣೆ ಮುಗಿದಿರೋ ಹಿನ್ನೆಲೆ ಕಸ್ಟಡಿಗೆ ಕೇಳುವ ಸಾಧ್ಯತೆ ಕಡಿಮೆ ಎನ್ನುತ್ತಿದೆ ಎಸ್‌ಐಟಿ ಮೂಲಗಳು.ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್‌ನಲ್ಲಿ ಬಂಧನವಾಗಿರೋ ರೇವಣ್ಣಗೆ ರೋಟಿನ್ ಚೆಕಪ್‌ಗೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆರೋಪಿಗೆ ಗ್ಯಾಸ್ಟ್ರಿಕ್ ಸಮಸ್ಯೆ ಉಲ್ಬಣಿಸಿದ ಕಾರಣ ಎದೆ ಉರಿ ಹೆಚ್ಚಾಗಿತ್ತು. ಈ ಹಿನ್ನೆಲೆ ಬೌರಿಂಗ್ ಆಸ್ಪತ್ರೆಯಲ್ಲಿ ಆರೋಪಿಗೆ ಎಳನೀರು ಕುಡಿಸಿ ಪ್ರಾಥಮಿಕ ಚಿಕಿತ್ಸೆ ಕೊಟ್ಟಿದ್ದಾರೆ. ಎದೆ ಉರಿ ಹೆಚ್ಚಾಗಿದ್ದರಿಂದ ಆಸ್ಪತ್ರೆ ವೈದ್ಯರು ವಿಕ್ಟೋರಿಯಾ ಆಸ್ಪತ್ರೆಗೆ ರೆಫರ್ ಮಾಡಿದ್ದರು. ನಂತರ ಹೆಚ್.ಡಿ.ರೇವಣ್ಣ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಎಸ್‍ಐಟಿ ತನಿಖೆ ಬಗ್ಗೆ ಅನುಮಾನ ಬೇಡ: ಪರಮೇಶ್ವರ್ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೇವಣ್ಣಗೆ ಇಸಿಜಿ, ಅಲ್ಟ್ರಾಸೌಂಡ್, ಎಕ್ಸ್ ರೇ ಮತ್ತು ಬ್ಲಡ್ ಟೆಸ್ಟ್ ಮಾಡಿಸಲಾಯ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಚಿಕಿತ್ಸೆ ಕೊಟ್ಟು ನಾರ್ಮಲ್ ಬಂದ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಎಸ್‌ಐಟಿಗೆ ಕಳಿಸಿಕೊಟ್ಟಿದ್ದಾರೆ. ಹೊಟ್ಟೆನೋವು, ಎದೆನೋವು ಗ್ಯಾಸ್ಟ್ರಿಕ್‌ನಿಂದ ಬಂದಿರೋದು ಅಥವಾ ಬೇರೆ ಸಮಸ್ಯೆ ಏನಾದ್ರು ಕಾಣಿಸಿಕೊಂಡಿದ್ಯಾ ಅಂತಾ ಚೆಕ್ ಮಾಡಿ ನಾರ್ಮಲ್ ಬಂದ ಬಳಿಕ ವೈದ್ಯರು ಡಿಸ್ಚಾರ್ಜ್ ಮಾಡಿ ಕಳಿಸಿಕೊಟ್ಟಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಎಸ್‌ಐಟಿ ಎಸ್ಪಿ ಸುಮನಾ ಡಿ ಪನ್ನೇಕರ್, ರೇವಣ್ಣ ಆರೋಗ್ಯ ಸಹಜ ಸ್ಥಿತಿ ಮರಳುತ್ತಿದ್ದಂತೆ ರೇವಣ್ಣರನ್ನ ಡಿಸ್ಚಾರ್ಜ್ ಮಾಡಿಸಿ ಸಿಐಡಿ ಕಚೇರಿಗೆ ಕರೆದೊಯ್ದರು.Sign in to your account
Username or Email Address


Password

 Remember Me


