ಬೆಂಗಳೂರು: ಸದ್ಯ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ (Prajwal Revanna) ಇಂದು ಶರಣಾಗ್ತಾರಾ ಎಂಬ ಪ್ರಶ್ನೆ ಎದ್ದಿದೆ.ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಂದೆ ಹೆಚ್‌ಡಿ ರೇವಣ್ಣ (HD Revanna) ಬಂಧನಕ್ಕೆ ಒಳಗಾದ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅವರನ್ನು ಬಂಧಿಸಲು ಎಸ್‌ಐಟಿ ಸಿದ್ಧತೆ ನಡೆಸುತ್ತಿದೆ.ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ (Mangaluru Airport) ಪ್ರಜ್ವಲ್‌ ಆಗಮಿಸುವ ಸಾಧ್ಯತೆಯಿದೆ. ಸದ್ಯ ಪ್ರಜ್ವಲ್‌ ಯುಎಇಯಲ್ಲಿ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲುಕೌಟ್‌ ನೋಟಿಸ್‌ ಜಾರಿಯಾದ ಹಿನ್ನೆಲೆಯಲ್ಲಿ ವಿಮಾನದಿಂದ ಇಳಿದು ವಲಸೆ ಕೇಂದ್ರದ ಬಳಿಯೇ ಬಂಧನವಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ನಾವು ಇದರಲ್ಲಿ ಮಧ್ಯಪ್ರವೇಶ ಮಾಡಲ್ಲ- ರೇವಣ್ಣ ಬಂಧನಕ್ಕೆ ಸಿಎಂ ಫಸ್ಟ್‌ ರಿಯಾಕ್ಷನ್‌ಈಗಾಗಲೇ ಅಬುಧಾಬಿಯಿಂದ ಬೆಳಗ್ಗೆ 6:24ಕ್ಕೆ ಆಗಮಿಸಿದ ವಿಮಾನಲ್ಲಿ ಪ್ರಜ್ವಲ್‌ ಬಂದಿಲ್ಲ. ದುಬೈನಿಂದ ಆಗಮಿಸುವ ಎರಡನೇ ವಿಮಾನ ಬೆಳಗ್ಗೆ 7:55ಕ್ಕೆ ಲ್ಯಾಂಡ್‌ ಆಗಲಿದೆ. ದುಬೈನಿಂದ ಸಂಜೆ 6:15ಕ್ಕೆ ಮತ್ತೊಂದು ವಿಮಾನ ಬರಲಿದೆ. ಕುವೈಟ್‌ನಿಂದ 6:40ಕ್ಕೆ ವಿಮಾನ ಬರಲಿದೆ. ಈ ವಿಮಾನಗಳ ಪೈಕಿ ಒಂದು ವಿಮಾನದಲ್ಲಿ ಪ್ರಜ್ವಲ್‌ ಬಂದು ಶರಣಾಗಬಹುದು ಎನ್ನಲಾಗುತ್ತಿದೆ. 






 Advertisement 




Sign in to your account
Username or Email Address


Password

 Remember Me


