ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ (Bus Accident) ಪರಿಣಾಮ ಇಬ್ಬರು ಸಾವನ್ನಪ್ಪಿ, 49 ಜನ ಗಾಯಗೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ (Honnavar) ಸುಳೆಮುರ್ಕಿ ತಿರುವಿನಲ್ಲಿ ನಡೆದಿದೆ.ಮೃತರನ್ನು ತುಮಕೂರಿನ ಲೋಕೇಶ್ (26), ಚಿಕ್ಕಬಳ್ಳಾಪುರದ ರುದ್ರೇಶ್ (38) ಎಂದು ಗುರುತಿಸಲಾಗಿದೆ. ಗೌರಿಬಿದನೂರಿನ ರಜನಿ (30) ಎಂಬವರು ಒಂದು ಕೈ ಕಳೆದುಕೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.ಬಸ್‍ನಲ್ಲಿ 53 ಮಂದಿ ಗೌರಿ ಬಿದನೂರಿನಿಂದ ಧರ್ಮಸ್ಥಳಕ್ಕೆ (Dharamshala) ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅಪಘಾತಕ್ಕೆ ಚಾಲಕನ ನಿರ್ಲಕ್ಷತನ ಮತ್ತು ಅತೀ ವೇಗವೇ ಕಾರಣ ಎನ್ನಲಾಗಿದೆ.ಗಾಯಾಳುಗಳನ್ನು ಉಡುಪಿ, ಶಿವಮೊಗ್ಗದ ಮೆಗ್ಗಾನ್ ಹಾಗೂ ಹೊನ್ನಾವರ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


