ಬೆಂಗಳೂರು: ರಾಜಧಾನಿ ಸೇರಿ ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಕೊಡಗು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಇದನ್ನೂ ಓದಿ: ಬಿಸಿಲ ಝಳಕ್ಕೆ ‘ಬೆಂದ’ಕಾಳೂರಿಗೆ ಮಳೆಯ ಸಿಂಚನಮೇ 6 ಮತ್ತು 7 ರಂದು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಬೆಂಗಳೂರಿನಲ್ಲಿ ತಾಪಮಾನ ಕಡಿಮೆ ಆಗುವ ಸಾಧ್ಯತೆಯಿದೆ. ನಾಳೆಯಿಂದ ಬೆಂಗಳೂರಿನಲ್ಲಿ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.ರಾಜ್ಯದ ಕೆಲ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಪೂರ್ವ ‌ಮುಂಗಾರು ಆರಂಭ ಆಗಿದೆ. ಮೇ 31 ರ ವರೆಗೂ ಪೂರ್ವ ಮುಂಗಾರು ಆರಂಭ ಆಗಲಿದೆ. ಜೂ.1 ರ ಬಳಿಕ ಮನ್ಸೂನ್ ಸೆಟ್ ಆಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಯಾವುದೇ ದೇಶಕ್ಕೆ ಹೋಗಿರಲಿ, ಹಿಡಿದು ತರ್ತೀವಿ: ಗುಡುಗಿದ ಸಿಎಂಬೇಸಿಗೆಯಲ್ಲಿ ಬೆಂದಿದ್ದ ಬೆಂಗಳೂರಿನಲ್ಲಿ ನಿನ್ನೆಯಿಂದ ಮಳೆಯಾಗುತ್ತಿದೆ. ಇಂದು ಕೂಡ ಬೆಂಗಳೂರಿನ ಹಲವೆಡೆ ಮಳೆಯಾಗಿದೆ. ಮಧ್ಯಾಹ್ನವಾಗುತ್ತಿದ್ದಂತೆ ಮೋಡ ಕವಿದ ವಾತಾವರಣ ಇತ್ತು. ಸಾಯಂಕಾಲದ ಹೊತ್ತಿಗೆ ಮಳೆ ಸುರಿದಿದೆ.Sign in to your account
Username or Email Address


Password

 Remember Me


