ಕೋಲಾರ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೃತೃತ್ವದ ರಾಜ್ಯ ಸರ್ಕಾರಕ್ಕೆ ನಿರ್ಮಲಾನಂದನಾಥ ಸ್ವಾಮೀಜಿ ಅಭಿನಂದನೆ ಸಲ್ಲಿಸಿದ್ದಾರೆ.ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದಲ್ಲಿರುವ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ರಾಜ್ಯದ ಬಹು ದೊಡ್ಡ ಸಮುದಾಯ ನಮ್ಮದು. ರಾಜ್ಯ ಸರ್ಕಾರಕ್ಕೆ ಈ ಹಿಂದೆ ನಾವು ನಿಗಮ ಮಂಡಳಿಗಾಗಿ ಒತ್ತಾಯ ಮಾಡಿದ್ವಿ. ಅದರಂತೆ ಈ ಬಜೆಟ್ ನಲ್ಲಿ ನಿಗಮ ಸ್ಥಾಪನೆ ಮಾಡಿರುವುದಕ್ಕೆ ಅಭಿನಂದನೆ ಎಂದು ಹೇಳಿದರು.500 ಕೊಟಿ ರೂಪಾಯಿ ಮೀಸಲಿಟ್ಟಿರುವ ರಾಜ್ಯ ಸರ್ಕಾರವನ್ನ ಅಬಿನಂಧಿಸುತ್ತೇನೆ. ಇದಕ್ಕೆ ಶ್ರಮಿಸಿದವರಿಗೂ ಕೃತಜ್ಞತೆಗಳನ್ನ ಸಲ್ಲಿಸುತ್ತೇನೆ ಎಂದರು. ಇದನ್ನೂ ಓದಿ:  ನಿಗಮ ಮಂಡಳಿಗಳ ಅಭಿವೃದ್ಧಿಗೆ ಅನುದಾನ – ಅಲ್ಪಸಂಖ್ಯಾತರ ಏಳಿಗೆಗೆ 1,500 ಕೋಟಿಇಂದಿನ ಬಜೆಟ್ ನಲ್ಲಿ ವಿವಿಧ ಮಂಡಳಿಗಳ ಅಭಿವೃದ್ಧಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅನುದಾನ ಘೋಷಿಸಿದ್ದಾರೆ. ಅಲ್ಪಸಂಖ್ಯಾತರ ಏಳಿಗೆಗಾಗಿ 1,500 ಕೋಟಿ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ಮತ್ತು ಒಕ್ಕಲಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಹೊಸ ನಿಗಮ ಸ್ಥಾಪಸಿ 500 ಕೋಟಿ ಮೀಸಲಿರಿದ್ದಾರೆ.ವೀರಶೈವ ಲಿಂಗಾಯತ ಸಮಾಜದ ಸಮಗ್ರ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ.ಗಳ ಅನುದಾನ. ಈಗಾಗಲೇ 100 ಕೋಟಿ ಬಿಡುಗಡೆಗೊಳಿಸಲಾಗಿದೆ. ಒಕ್ಕಲಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಹೊಸ ನಿಗಮ ಸ್ಥಾಪನೆ ಹಾಗೂ ನಿಗಮ ಚಟುವಟಿಕೆಗಳಿಗೆ 500 ಕೋಟಿ ವೆಚ್ಚ ಮಾಡಲು ಯೋಜಿಸಲಾಗಿದೆ. ಅಲ್ಪಸಂಖ್ಯಾತರ ಏಳಿಗೆಗಾಗಿ 1,500 ಕೋಟಿ ಮೀಸಲಿಟ್ಟಿದ್ದಾರೆ.Sign in to your account
Username or Email Address


Password

 Remember Me


