ಚಿಕ್ಕಮಗಳೂರು: ಗ್ರಾಮ ಪಂಚಾಯಿತಿಯಲ್ಲೇ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿ ಬಾಗಿಲನ್ನೂ ಹಾಕದೆ ಬಾಗಿಲ ಬಳಿಯೇ ನಿದ್ದೆಗೆ ಜಾರಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ದೇವನೂರು ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.ಮಾರ್ಚ್ 7 ಭಾನುವಾರವಾದ್ದರಿಂದ ಗ್ರಾಮ ಪಂಚಾಯಿತಿಯ ವಾಟರ್ ಮ್ಯಾನ್ ಅರುಣ್ ಹಾಗೂ ಅಟೆಂಡರ್ ಅವಿನಾಶ್ ಗ್ರಾಮ ಪಂಚಾಯಿತಿಯಲ್ಲೇ ಸಂಡೇ ಸ್ಪೆಷಲ್ ಡ್ರಿಂಕ್ಸ್ ಪಾರ್ಟಿ ಮಾಡಿದ್ದಾರೆ. ಪಾರ್ಟಿಯ ಬಳಿಕ ಫುಲ್ ಟೈಟ್ ಆದ ಇಬ್ಬರೂ ಗ್ರಾಮ ಪಂಚಾಯಿತಿ ಕಚೇರಿಯ ಬಾಗಿಲನ್ನೂ ಹಾಕಿಲ್ಲ. ಗ್ರಾಮ ಪಂಚಾಯಿತಿಯ ಆವರಣದಲ್ಲಿ ನಿದ್ದೆಗೆ ಜಾರಿದ್ದಾರೆ.ರಾತ್ರಿ 11 ಗಂಟೆಯಾದರೂ ಗ್ರಾಮ ಪಂಚಾಯಿತಿ ಬಾಗಿಲು ಹಾಕದ್ದನ್ನ ಗಮನಿಸಿದ ಸ್ಥಳೀಯರು, ಹೋಗಿ ನೋಡಿದ್ದಾರೆ. ಸಿಬ್ಬಂದಿ ನಶೆಯಲ್ಲಿ ತೇಲುತ್ತಿದ್ದು, ಗಾಢ ನಿದ್ದೆಗೆ ಜಾರಿದ್ದರು. ಇದನ್ನು ಕಂಡ ಸ್ಥಳಿಯರೇ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿಕೊಂಡು ಬಂದಿದ್ದಾರೆ. ವಿಷಯವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಇಬ್ಬರನ್ನೂ ಕೆಲಸದಿಂದ ವಜಾಗಿಳಿಸುವಂತೆ ಆಗ್ರಹಿಸಿದ್ದಾರೆ.Sign in to your account
Username or Email Address


Password

 Remember Me


