ಬೆಂಗಳೂರು: ಅಪಾರ್ಟ್‌ಮೆಂಟ್‌ ಖರೀದಿಸುವ ಮಂದಿಗೆ ಸಿಎಂ ಯಡಿಯೂರಪ್ಪ ಗುಡ್‌ನ್ಯೂಸ್‌ ನೀಡಿದ್ದಾರೆ.ಕೈಗೆಟಕುವ ದರಗಳ ಮನೆಗಳನ್ನು ಪ್ರೋತ್ಸಾಹಿಸಲು, 35 ಲಕ್ಷ ರೂ.ಗಳಿಂದ 45 ಲಕ್ಷ ರೂ.ಗಳವರೆಗಿನ ಮೌಲ್ಯದ ಅಪಾರ್ಟ್‌ಮೆಂಟ್‌ಗಳ ಮೊದಲನೇ ನೋಂದಣಿಗೆ ಇದ್ದ ಮುದ್ರಾಂಕ ಶುಲ್ಕವನ್ನು ಶೇ.5 ರಿಂದ ಶೇ.3ಕ್ಕೆ ಕಡಿಮೆ ಮಾಡುವುದಾಗಿ ಹೇಳಿದ್ದಾರೆ. 2020-21ನೇ ಸಾಲಿನ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 12,655 ಕೋಟಿ ರೂ. ಆದಾಯ ನಿಗದಿ ಪಡಿಸಲಾಗಿತ್ತು. ಆದರೆ ಫೆಬ್ರವರಿ ಅಂತ್ಯಕ್ಕೆ 9,014 ಕೋಟಿ ರೂ. ಆದಾಯ ಸಂಗ್ರಹವಾಗಿದೆ.2021-22ನೇ ಆರ್ಥಿಕ ವರ್ಷದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 12,655 ಕೋಟಿ ರೂ. ಆದಾಯ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.Sign in to your account
Username or Email Address


Password

 Remember Me


