ಬೆಂಗಳೂರು: ಇಂದು ಕರ್ನಾಟಕದಲ್ಲಿ 622 ಮಂದಿಗೆ ಕೊರೊನಾ ಬಂದಿದ್ದು, ಬೆಂಗಳೂರಿನಲ್ಲಿ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಕಂಡು ಇಂದು 389 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಆಸ್ಪತ್ರೆಯಿಂದ 351 ಜನ ಡಿಸ್ಚಾರ್ಜ್ ಆಗಿದ್ದಾರೆ. 3 ಜನ ಕೊರೊನಾಗೆ ಬಲಿಯಾಗಿದ್ದಾರೆ. ಇಂದು ರಾಜ್ಯದಲ್ಲಿ ಒಟ್ಟು 428 ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ.ಇಂದು ಬಾಗಲಕೋಟೆ, ಕೊಪ್ಪಳ, ರಾಮನಗರ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,55,015 ಕ್ಕೆ ಏರಿಕೆ ಆಗಿದೆ. ಈ ಪೈಕಿ 9,35,772 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 6,862 ಸಕ್ರಿಯ ಪ್ರಕರಣಗಳಿವೆ.ಒಟ್ಟು ಇಲ್ಲಿಯವರೆಗೆ 12,362 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 115 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 3,874 ಆಂಟಿಜನ್ ಟೆಸ್ಟ್, 72,086 ಆರ್ ಟಿ ಪಿಸಿಆರ್ ಸೇರಿದಂತೆ ಒಟ್ಟು 75,960 ಮಂದಿಗೆ ಪರೀಕ್ಷೆ ಮಾಡಲಾಗಿದೆ.ಇಂದು ಬೆಂಗಳೂರಿನಲ್ಲಿ 389 ಕೇಸ್ ವರದಿಯಾಗಿದೆ. ಕಲಬುರಗಿ 34 ಉಡುಪಿ 30, ತುಮಕೂರು 25, ಬೀದರ್ 24, ದಕ್ಷಿಣ ಕನ್ನಡದ 16 ಮಂದಿಗೆ ಸೋಂಕು ಬಂದಿದೆ. ಒಟ್ಟು 115 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 49, ಕಲಬುರಗಿ 10, ಮೈಸೂರು 5, ಬೆಳಗಾವಿ ಮತ್ತು ದಕ್ಷಿಣ ಕನ್ನಡದಲ್ಲಿ 4 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.






 Advertisement 




Sign in to your account
Username or Email Address


Password

 Remember Me


