ತುಮಕೂರು: ಟಿ.ವಿಯಲ್ಲಿ ಬಂದಿರುವುದನ್ನು ವಾಪಸ್ ತೆಗೆದುಕೊಳ್ಳಲು ಆಗುತ್ತಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.ದಿನೇಶ್ ಕಲ್ಲಹಳ್ಳಿ ಕೇಸ್ ವಾಪಸ್ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಮಧುಗಿರಿಯಲ್ಲಿ ಹೇಳಿಕೆ ನೀಡಿದ ಮಾಜಿ ಸಿಎಂ, ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ತೆಗೆದುಕೊಂಡಿದ್ದಾರೆ. ಆದರೆ ಟಿವಿಯಲ್ಲಿ ಬಂದಿರುವ ವೀಡಿಯೋಗಳನ್ನು ವಾಪಸ್ ತೆಗೆದುಕೊಳ್ಳಲು ಆಗುತ್ತಾ ಎಂದು ಹೇಳಿದ್ದಾರೆ.ಮಾಜಿ ಸಚಿವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಹಿಂಪಡೆದ ಬಳಿಕ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಪ್ರತಿಕ್ರಿಯಿಸಿ, ಮಾಜಿ ಸಿಎಂ ಕುಮಾರಸ್ವಾಮಿ ಡೀಲ್ ಆರೋಪದ ಹೇಳಿಕೆ ಬೇಸರ ತಂದಿದೆ. ದೂರು ನೀಡಿದ್ದವರನ್ನ ಟಾರ್ಗೆಟ್ ಮಾಡಲಾಗ್ತಿದೆ ಎಂದು ಆರೋಪಿಸಿದ್ದಾರೆ.ದೂರು ಹಿಂಪಡೆಯುವ ಬಗ್ಗೆ ವಕೀಲರ ಜೊತೆ ಚರ್ಚಿಸಿದ್ದೇನೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ನಮ್ಮ ವಕೀಲರು ಹೋಗಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ದೂರುದಾರ 5 ಕೋಟಿ ತೆಗೆದುಕೊಂಡು ಡೀಲ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಕುಮಾರಸ್ವಾಮಿ ಅವರ ಹೇಳಿಕೆಯಿಂದ ಜನರು ನನ್ನನ್ನು ಸಂಶಯದಿಂದ ನೋಡುತ್ತಿದ್ದಾರೆ. ಈ ಆರೋಪ ನನ್ನ ಸಾಮಾಜಿಕ ಹೋರಾಟಕ್ಕೆ ಹಿನ್ನಡೆ ಅಂತ ನಾನು ಅರ್ಥೈಸಿಕೊಂಡಿದ್ದೇನೆ. ಮಾಹಿತಿ ನೀಡುವವರನ್ನ ಟಾರ್ಗೆಟ್ ಮಾಡೋದು ಬಹಳ ನೋವಿನ ಸಂಗತಿ ಎಂದು ಬೇಸರ ಹೊರ ಹಾಕಿದರು.ಮಾರ್ಚ್ 2ರಂದು ಮಾಜಿ ಸಚಿವರ ವಿರುದ್ಧ ದಿನೇಶ್ ಕಲ್ಲಹಳ್ಳಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಶುಕ್ರವಾರ ಪೊಲೀಸರ ಮುಂದೆ ಹಾಜರಾಗಿ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು. ಇತ್ತ ವೀಡಿಯೋ ಸಂಚಲನ ಸೃಷ್ಟಿಸಿ ಮಾಜಿ ಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಹ ನೀಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ದಿನೇಶ್ ಕಲ್ಲಹಳ್ಳಿ, ಇನ್ನೂ ಮೂವರ ವೀಡಿಯೋಗಳು ತಮ್ಮ ಬಳಿಯಲ್ಲಿರುವ ಬಗ್ಗೆ ಹೇಳಿದ್ದರು.Sign in to your account
Username or Email Address


Password

 Remember Me


