ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ 14 ವರ್ಷ ಪ್ರಾಯದ ಶಾಲಾ ಬಾಲಕಿಯೋರ್ವಳನ್ನು ನಂಬಿಸಿ, ಆಕೆಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ ಗರ್ಭಿಣಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಾಗರ ಮೂಲದ ಸಂತ್ರಸ್ತೆ ಈ ಹಿಂದೆ ತನ್ನ ತಾಯಿಯೊಂದಿಗೆ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದಳು. ನಂತರ ಇನ್ನೊಂದು ಮನೆಯನ್ನು ಬಾಡಿಗೆಗೆ ಪಡೆದು ನೆಲೆಸಿದ್ದರು. ಸಂತ್ರಸ್ತ ಬಾಲಕಿಯು ತನ್ನ ಗೆಳತಿಯ ಮನೆಗೆ ಆಗಾಗ್ಗೆ ಬಂದು ಹೋಗುತ್ತಿದ್ದಳು. ಈ ಸಂದರ್ಭ ಆರೋಪಿಗಳೊಂದಿಗೆ ಸ್ನೇಹ ಬೆಳೆದಿತ್ತು. ಕೆಳದಿನಗಳ ನಂತರ ಸ್ನೇಹ ಪ್ರೇಮಕ್ಕೆ ತಿರುಗಿತ್ತು. ಬಾಲಕಿಯ ಪ್ರೇಮವನ್ನು ದುರುಪಯೋಗ ಪಡಿಸಿಕೊಂಡ ಆರೋಪಿಗಳಿಬ್ಬರು ಬಾಲಕಿಯನ್ನು ಅತ್ಯಾಚಾರ ಮಾಡಿದ್ದಾರೆ.ಬಾಲಕಿಯ ತಾಯಿ ನೀಡಿದ ದೂರಿನ ಮೆರೆಗೆ ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಈಗಾಗಲೇ ಸಂತ್ರಸ್ತ ಬಾಲಕಿಯನ್ನು ಭಟ್ಕಳದ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದ್ದು, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


