ಚಾಮರಾಜನಗರ: ಸೊಸೆಯನ್ನು ಕೊಲೆ ಮಾಡಿ ಮಾವನೂ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಚಾಮರಾಜನಗರದಲ್ಲಿ ನಡೆದಿದೆ.ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಆದರ್ಶ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಸುಮಿತ್ರಾ(32) ಕೊಲೆಯಾದ ದುರ್ದೈವಿ, ಚಿಕ್ಕಹುಚ್ಚಯ್ಯ(60) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಸೊಸೆಯನ್ನು ಕೊಲೆ ಮಾಡಿ ಮಾವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಸೊಸೆ ಹಾಗೂ ಮಾವನ ಸಾವು ಇದೀಗ ಸ್ಥಳೀಯರಲ್ಲಿ ಹಲವು ಅನುಮಾನಗಳನ್ನು ಮೂಡಿಸಿದೆ.ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಕೊಳ್ಳೇಗಾಲ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.Sign in to your account
Username or Email Address


Password

 Remember Me


