ಉಡುಪಿ: ಚಾಲಕಿಯ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿದ ಘಟನೆ ಉಡುಪಿಯಲ್ಲಿ ನಡೆದಿದೆ.ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು ಲಕ್ಷ್ಮಿಂದ್ರ ನಗರದ ಬಳಿ ನಿಯಂತ್ರಣ ತಪ್ಪಿ ಕಂದಕಕ್ಕೆ ಇಳಿದಿದೆ. ಈ ಸಂದರ್ಭ ರಸ್ತೆ ಬದಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿದೆ.5 ದ್ವಿಚಕ್ರ ವಾಹನಗಳು ಕಾರಿನ ಜೊತೆಗೆ ಮಳೆಗಾಲದಲ್ಲಿ ನೀರು ಹರಿಯುವ ತೋಡಿಗೆ ಬಿದ್ದಿದೆ. ಕೆಳಭಾಗದಲ್ಲಿ ಮರವಿದ್ದ ಕಾರಣ ಕಾರು ಸಂಪುರ್ಣವಾಗಿ ಕಂದಕಕ್ಕೆ ಉರುಳದೆ ನಿಂತಿದೆ. ಅದೃಷ್ಟವಶಾತ್ ಕಾರು ಚಾಲಕಿಗೆ ಯಾವುದೇ ಗಾಯಗಳು ಆಗಿಲ್ಲ.ರಸ್ತೆ ಬದಿ ನಿಲ್ಲಿಸಲಾಗಿದ್ದ ನ್ಯೂ ಮಣಿಪಾಲ್ ಬಜಾರ್ ನ ಸೆಕೆಂಡ್ ಹ್ಯಾಂಡ್ ವಾಹನಗಳಗೆ ಕಾರು ಡಿಕ್ಕಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.Sign in to your account
Username or Email Address


Password

 Remember Me


