ಬೆಳಗಾವಿ: ಮಂಗಳವಾರದಿಂದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಹಿರಂಗೊಂಡಿರುವ ಹಿನ್ನೆಲೆ ಸಹೋದರನ ರಾಸಲೀಲೆ ಸಿಡಿ ಪ್ರಕರಣದಿಂದ ಮುಜುಗರಗೊಂಡು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.ಮಂಗಳವಾರ ಬೆಳಗ್ಗೆ 11 ಗಂಟೆಗೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಿಗದಿಯಾಗಿತ್ತು. ಆದರೆ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಕರ್ಮಕಾಂಡ ಬಹಿರಂಗವಾಗುತ್ತಿದ್ದಂತೆಯೇ ಪೂರ್ವನಿಯೋಜಿತ ಕಾರ್ಯಕ್ರಮ ರದ್ದುಗೊಳಿಸಿದ್ದಾರೆ.ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ನಿನ್ನೆ ಬಹಿರಂಗಗೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ನಿನನೆಯಿಂದ ಆಕ್ರೋಶ ವ್ಯಕ್ತವಾಗುತ್ತಿತ್ತು. ಇದರ ಬೆನ್ನೆಲ್ಲೇ ಸರ್ಕಾರಕ್ಕೆ ನನ್ನಿಂದ ಯಾವುದೇ ಮುಜುಗರವಾಗಬಾರದೆಂದು ರಮೇಶ್ ಜಾರಕಿಹೊಳಿ ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.Sign in to your account
Username or Email Address


Password

 Remember Me


