ಬೆಳಗಾವಿ: ಲೋಕಸಭಾ ಕ್ಷೇತ್ರದಿಂದ (Lok Sabha Election) ನಾನೇ ಸ್ಪರ್ಧಿಸಿದ್ದೇನೆ ಎಂದು ತಿಳಿದುಕೊಳ್ಳಿ. ಕಾಂಗ್ರೆಸ್ (Congress) ಅಭ್ಯರ್ಥಿಗೆ ಮತಹಾಕಿದರೆ ನನಗೆ ಮತ ಹಾಕಿದಂತೆ. ಈ ಮೂಲಕ ಸ್ಥಳೀಯ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕರೆ ನೀಡಿದರು.ಯರಗಟ್ಟಿಯ ಬಸವೇಶ್ವರ ಪ್ರೌಢ ಶಾಲಾ ಆವರಣದಲ್ಲಿ ಭಾನುವಾರ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೇ 7 ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು. ಇದನ್ನೂ ಓದಿ: ಕಾಂಗ್ರೆಸ್‌ಗೆ ತನ್ನ ಸದಸ್ಯನ ಮಗಳನ್ನೇ ರಕ್ಷಣೆ ಮಾಡೋಕೆ ಆಗ್ಲಿಲ್ಲ: ನೇಹಾ ಹತ್ಯೆ ಖಂಡಿಸಿದ ಮೋದಿಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸವನ್ನು ಮಾಡಿದ್ದಾರೆ. 2014ರಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಲೋಕಸಭೆಗೆ ನಿಂತು ಸ್ವಲ್ಪ ಮತಗಳಿಂದ ಸೋತಿದ್ದರು. ಈ ಬಾರಿ ಅವರ ಮಗನನ್ನು ಆರಿಸಿ ಲೋಕಸಭೆಗೆ ಕಳುಹಿಸಿಕೊಡಬೇಕು ಎಂದರು. ಇದನ್ನೂ ಓದಿ: ಪಬ್ಲಿಕ್‌ ಟಿವಿ ವಿದ್ಯಾಪೀಠ 7ನೇ ಆವೃತ್ತಿಗೆ ಅದ್ದೂರಿ ತೆರೆಕಳೆದ ಚುನಾವಣೆಯಲ್ಲಿ ಕರ್ನಾಟಕದಿಂದ 25 ಜನ ಬಿಜೆಪಿಯಿಂದ ಗೆದ್ದಿದ್ದರು. ಸುರೇಶ್ ಅಂಗಡಿ ಮಂತ್ರಿ ಆಗಿದ್ದರು. ಬಳಿಕ ಅವರ ಪತ್ನಿ ಕೂಡ ಗೆದ್ದಿದ್ದರು. ಬಿಜೆಪಿಯ 25 ಜನ ಎಂಪಿಗಳು ಮಾತಾಡಿಲ್ಲ. ಹೀಗಿರುವಾಗ ಜಗದೀಶ್ ಶೆಟ್ಟರ್ ಅವರಿಗೆ ಮೋದಿ ಎದುರು ಮಾತಾಡುವ ಧೈರ್ಯ ಇದ್ಯಾ? ಮೋದಿ ಕಂಡರೆ ಅವರಿಗೆ ಭಯ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಹೆಚ್‌.ಡಿ.ರೇವಣ್ಣ ಎ1, ಪ್ರಜ್ವಲ್‌ ರೇವಣ್ಣ ಎ2 ಆರೋಪಿ – ಮನೆ ಕೆಲಸದಾಕೆಯಿಂದ ದೂರುಮಂಗಳಾ ಅಂಗಡಿಗೆ ಟಿಕೆಟ್ ಕೊಟ್ಟರೆ ಗೆಲ್ಲೋದಿಲ್ಲ ಅಂತ ಈ ಬಾರಿ ಜಗದೀಶ್ ಶೆಟ್ಟರ್ ಅವರನ್ನು ಹುಬ್ಬಳ್ಳಿಯಿಂದ ನಿಲ್ಲಿಸಿದ್ದಾರೆ. ಜಗದೀಶ್ ಶೆಟ್ಟರ್ ಚಂಚಲ ಮನಸಿನ ವ್ಯಕ್ತಿ, ಬದ್ಧತೆ ಇಲ್ಲದ ಮನುಷ್ಯ. ಕಳೆದ ಬಾರಿ ಬಿಜೆಪಿಯವರು ಟಿಕೆಟ್ ಕೊಡದಿದ್ದಕ್ಕೆ ಕಾಂಗ್ರೆಸ್‌ಗೆ ಬಂದರು. ಕಾಂಗ್ರೆಸ್ ಟಿಕೆಟ್ ಕೊಟ್ಟರೂ ಶೆಟ್ಟರ್ ಸೋತರು. ಇದೀಗ ಬೆಳಗಾವಿಯಲ್ಲಿ ಮಂಗಳಾ ಅಂಗಡಿ ಬದಲಿಗೆ ಶೆಟ್ಟರ್ ಅವರನ್ನು ನಿಲ್ಲಿಸಲಾಗಿದೆ. ಕರ್ನಾಟಕದಲ್ಲಿ 12, ದೇಶಾದ್ಯಂತ 100 ಹಾಲಿ ಎಂಪಿಗಳಿಗೆ ಬಿಜೆಪಿ ಟಿಕೆಟ್ ಕೊಟ್ಟಿಲ್ಲ. ಇನ್ನು ಹುಬ್ಬಳ್ಳಿಯಲ್ಲಿ ಗೆಲ್ಲದ ಶೆಟ್ಟರ್ ಇಲ್ಲಿ ನಿಜವಾಗಿಯೂ ಗೆಲ್ತಾರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮೋದಿ ಕಾರ್ಯಕ್ರಮ ಸ್ಥಳಕ್ಕೆ NSUI ಸಂಘಟನೆ ಮುತ್ತಿಗೆ ಯತ್ನಪ್ರಧಾನಿ ಮೋದಿ ಮಾತನಾಡಿದರೆ ಹಸಿ ಸುಳ್ಳು. ಶಿವಾಜಿ, ಕಿತ್ತೂರು ರಾಣಿ ಚೆನ್ನಮ್ಮಗೆ ಕಾಂಗ್ರೆಸ್ ಅವಮಾನಿಸಿದೆ ಎಂದು ಮೋದಿ ಸುಳ್ಳು ಹೇಳಿದ್ದಾರೆ. ಈ ಮಹನೀಯರನ್ನು ಅತ್ಯಂತ ಗೌರವಯುತವಾಗಿ ಕಾಂಗ್ರೆಸ್ ನೋಡಿಕೊಂಡಿದೆ. ಭಕ್ತರ ಅನುಕೂಲಕ್ಕೆ ಯಲ್ಲಮ್ಮನ ಪ್ರಾಧಿಕಾರ ಮಾಡುತ್ತೇವೆ ಎಂದರು. ಇದನ್ನೂ ಓದಿ: ನೇಹಾ ಬದಲು ಮುಸ್ಲಿಂ ಸಾವಾಗಿದ್ರೆ ಸಿಎಂ ಹೆಲಿಕಾಪ್ಟರ್ ಇಳಿಸ್ತಿದ್ರು: ಯತ್ನಾಳ್10 ವರ್ಷಗಳಿಂದ ಮೋದಿ ಪ್ರಧಾನಿ ಆಗಿದ್ದರೂ ಜನಸಾಮಾನ್ಯರಿಗೆ ಏನು ಪ್ರಯೋಜನ ಆಗಿಲ್ಲ. ಅಗತ್ಯ ಬೆಲೆ ಇಳಿಯಲಿಲ್ಲ. ಎಲ್ಲಿ ಹೋಯಿತು ಮೋದಿ ಹೇಳಿದ ಅಚ್ಛೆ ದಿನ್? 2014ರಲ್ಲಿ ಡಿಸೇಲ್ 48, ಇವತ್ತು 95 ರೂಪಾಯಿ ಆಗಿದೆ. ಅಗತ್ಯ ವಸ್ತುಗಳ ಬೆಲೆ ದುಪ್ಪಟ್ಟು ಆಗಿದೆ. ರೈತರ ಆದಾಯ ದುಪ್ಪಟ್ಟು ಮಾಡಲಿಲ್ಲ. ಬಿಜೆಪಿ ಅಂದ್ರೆ ಸುಳ್ಳಿನ ಫ್ಯಾಕ್ಟರಿ. ಸುಳ್ಳೇ ಅವರ ಮನೆ ದೇವರು ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಕೇಸ್ – ನೊಂದ ಮಹಿಳೆಯಿಂದ ಮಹಿಳಾ ಆಯೋಗಕ್ಕೆ ದೂರುನಾವು ನುಡಿದಂತೆ ನಡೆದಿದ್ದೇವೆ. ಚುನಾವಣೆಗೂ ಮುನ್ನ ಕೊಟ್ಟ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಇದುವರೆಗೂ 200 ಕೋಟಿ ಮಹಿಳೆಯರು ಫ್ರೀ ಆಗಿ ಪ್ರಯಾಣ ಮಾಡಿದ್ದಾರೆ. ಈ ಹಿಂದಿನ ನಮ್ಮ ಸರ್ಕಾರ ಅನ್ನಭಾಗ್ಯ ಕಾರ್ಯಕ್ರಮದಡಿ 7 ಕೆಜಿ ನೀಡುತ್ತಿದ್ದೆವು. ಬಿಎಸ್ ಯಡಿಯೂರಪ್ಪ 5 ಕೆಜಿಗೆ ಇಳಿಸಿದರು. 2023ರಲ್ಲಿ 10ಕೆಜಿ ಅಕ್ಕಿಯನ್ನು ಫ್ರೀ ಆಗಿ ಕೊಡುತ್ತೇವೆ ಎಂದು ಹೇಳಿದರು. ನಾವು ದುಡ್ಡು ಕೊಟ್ಟರು ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ. ಅಕ್ಕಿ ಬದಲಿಗೆ ತಿಂಗಳಿಗೆ 170 ರೂಪಾಯಿ ಕೊಡ್ತಾ ಇದ್ದೀವಿ. ಗೃಹ ಜ್ಯೋತಿ 200 ಯೂನಿಟ್‌ರವರೆಗೆ ಎಲ್ಲರಿಗೂ ಫ್ರೀ, ಗೃಹಲಕ್ಷ್ಮಿ ಯೋಜನೆಯಡಿ 1.20 ಕೋಟಿ ಮನೆಯ ಒಡತಿಯರಿಗೆ ತಿಂಗಳಿಗೆ 2,000 ರೂ. ನೀಡಲಾಗುತ್ತಿದೆ. ಅಧಿಕಾರಕ್ಕೆ ಬಂದ ಎಂಟು ತಿಂಗಳಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಪ್ರತಿ ಕುಟುಂಬಕ್ಕೆ 5 ರಿಂದ 6 ಸಾವಿರ ರೂ. ಸಿಗುತ್ತಿದೆ ಎಂದರು. ಇದನ್ನೂ ಓದಿ: ರಾಮ ಮಂದಿರ ನಿರ್ಮಾಣ ಮಾಡದಂತೆ ಕಾಂಗ್ರೆಸ್‌, ಹಿಂಬಾಲಕರಿಂದ ಕುತಂತ್ರ: ಮೋದಿಲೋಕಸಭಾ ಚುನಾವಣಾ ನಂತರ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ. ಇದಕ್ಕಾಗಿ 50 ಸಾವಿರ ಕೋಟಿ ರೂ. ಬಜೆಟ್‌ನಲ್ಲಿ ಮೀಸಲು ಇಡಲಾಗಿದೆ. ನಮ್ಮ ಖಜಾನೆ ಖಾಲಿ ಆಗಿಲ್ಲ, ಆಗೋದು ಇಲ್ಲ ಎಂದು ಹೇಳಿದರು. ಬರ ಪರಿಹಾರ ನೀಡಲು ವಿಳಂಬ ಮಾಡಿದ ಕೇಂದ್ರ ಸರ್ಕಾರ 100 ರೂಪಾಯಿ ಕೇಳಿದರೆ ಕೇವಲ 19 ರೂಪಾಯಿ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಟೀಕಿಸಿದರು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ – ಸಮಗ್ರ ತನಿಖೆಗೆ ಎಸ್‌ಐಟಿ ರಚನೆ






 Advertisement 




Sign in to your account
Username or Email Address


Password

 Remember Me


