ಬೆಂಗಳೂರು: ಇಂದು ರಾಜ್ಯದಲ್ಲಿ 437 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 309 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ ಇಂದು 7 ಜನ ಬಲಿಯಾಗಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12,343ಕ್ಕೆ ಏರಿಕೆಯಾಗಿದೆ.ಕೊರೊನಾ ಸೋಂಕಿತರ ಸಂಖ್ಯೆ 9,52,037ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 5,945 ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳ ಪೈಕಿ 116 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಬೆಂಗಳೂರು ನಗರ ಜಿಲ್ಲೆಯಲ್ಲಿ 4, ಮೈಸೂರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.0.68 ಮತ್ತು ಮರಣ ಪ್ರಮಾಣ ಶೇ.1.60ರಷ್ಟು ದಾಖಲಾಗಿದೆ. ಇಂದು 64,247 ಸ್ಯಾಂಪಲ್ ಗಳನ್ನ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಕೊರೊನಾ ವಾರಿಯರ್ಸ್ ಹಾಗೂ ಹಿರಿಯ ನಾಗರಿಕರು ಸೇರಿ ಒಟ್ಟು 10,046 ಜನ ಮಾತ್ರ ಕೊರೊನಾ ಲಸಿಕೆ ಪಡೆದಿದ್ದಾರೆ.ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 5, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 282, ಬೀದರ್ 16, ಚಾಮರಾಜನಗರ 2, ಚಿಕ್ಕಬಳ್ಳಾಪುರ 9, ಚಿಕ್ಕಮಗಳೂರು 1, ಚಿತ್ರದುರ್ಗ 11, ದಕ್ಷಿಣ ಕನ್ನಡ 19, ದಾವಣಗೆರೆ 3, ಧಾರವಾಡ 1, ಗದಗ 0, ಹಾಸನ 6, ಹಾವೇರಿ 1, ಕಲಬುರಗಿ 8, ಕೊಡಗು 1, ಕೋಲಾರ 1, ಕೊಪ್ಪಳ 1, ಮಂಡ್ಯ 5, ಮೈಸೂರು 15, ರಾಯಚೂರು 2, ರಾಮನಗರ 1, ಶಿವಮೊಗ್ಗ 6, ತುಮಕೂರು 15, ಉಡುಪಿ 6, ಉತ್ತರ ಕನ್ನಡ 2, ವಿಜಯಪುರ 4 ಮತ್ತು ಯಾದಗಿರಿಯಲ್ಲಿ 3 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.Sign in to your account
Username or Email Address


Password

 Remember Me


