ಬೆಂಗಳೂರು: ಇಂದು ಕರ್ನಾಟಕದಲ್ಲಿ 349 ಮಂದಿಗೆ ಕೊರೊನಾ ಬಂದಿದ್ದು, ಬೆಂಗಳೂರಿನಲ್ಲಿ 210 ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ. ಆಸ್ಪತ್ರೆಯಿಂದ 324 ಜನ ಡಿಸ್ಚಾರ್ಜ್ ಆಗಿದ್ದಾರೆ. 5 ಜನ ಕೊರೊನಾಗೆ ಬಲಿಯಾಗಿದ್ದು, ಇಂದು 3809 ಮಂದಿಗೆ ಲಸಿಕೆ ನೀಡಲಾಗಿದೆ.ಇಂದು ಬಾಗಲಕೋಟೆ, ಬೀದರ್, ಚಾಮರಾಜನಗರ, ಹಾವೇರಿ, ಕೋಲಾರ, ಕೊಪ್ಪಳ, ರಾಮನಗರ, ರಾಯಚೂರುನಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,51,600ಕ್ಕೆ ಏರಿಕೆ ಆಗಿದೆ. ಈ ಪೈಕಿ 9,33,421 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 5,824 ಸಕ್ರಿಯ ಪ್ರಕರಣಗಳಿವೆ.ಒಟ್ಟು ಇಲ್ಲಿಯವರೆಗೆ 12,336 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 118 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 1,921 ಆಂಟಿಜನ್ ಟೆಸ್ಟ್, 58,206 ಆರ್‍ಟಿ ಪಿಸಿಆರ್ ಸೇರಿದಂತೆ ಒಟ್ಟು 60,127 ಮಂದಿಗೆ ಪರೀಕ್ಷೆ ಮಾಡಲಾಗಿದೆ.ಬೆಂಗಳೂರು ನಗರದಲ್ಲಿ 210 ಮಂದಿಗೆ ಸೋಂಕು ಬಂದಿದೆ. ತುಮಕೂರು 28, ಕಲಬುರಗಿ ಮತ್ತು ಮೈಸೂರು 14, ವಿಜಯಪುರ 12, ಧಾರವಾಡ 11, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಳ್ಳಾರಿ, ಚಿತ್ರದುರ್ಗದ 8 ಮಂದಿಗೆ ಸೋಂಕು ಬಂದಿದೆ. ಒಟ್ಟು 118 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 52, ಕಲಬುರಗಿ 9, ಧಾರವಾಡ 6, ಮೈಸೂರು, ತುಮಕೂರು ಮತ್ತು ಹಾಸನದಲ್ಲಿ 4 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.






 Advertisement 




Sign in to your account
Username or Email Address


Password

 Remember Me


