ವಿಜಯಪುರ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಬಯಸಿದ್ದೇನೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಬಯಸಿದ್ದೇನೆ. ಈ ಸಂಬಂಧ ನಾನು ಈಗಾಗಲೇ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದೇನೆ ಎಂದರು.ಮೂರು ವರ್ಷ ಅವಧಿಯಲ್ಲಿ ನಾನು ಸೇವೆ ಸಲ್ಲಿಸಲು ಬಯಸಿದ್ದೇನೆ. ಬಿಜೆಪಿ ಹೈಕಮಾಂಡ್ ನಂಗೆ ಅವಕಾಶ ಕಲ್ಪಿಸಿ ಕೊಡಬೇಕು. ಒಂದು ವೇಳೆ ನಂಗೆ ಅವಕಾಶ ಕೊಡದಿದ್ದರೂ ನಾನು ಬಿಜೆಪಿ ಗೆಲುವಿಗೆ ಶ್ರಮಿಸ್ತೀನಿ. ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡ್ತೀನಿ ಎಂದು ಹೇಳಿದರು.


 Advertisement 







 Advertisement 




Sign in to your account
Username or Email Address


Password

 Remember Me


