ಹುಬ್ಬಳ್ಳಿ:  ಕಿಮ್ಸ್‌ನ ವೈದ್ಯಕೀಯ ವಿದ್ಯಾರ್ಥಿಗಳು ತಾತ್ಕಾಲಿಕವಾಗಿ ತಂಗಿದ್ದ ಕಟ್ಟಡದ ಮೇಲೆ ಕಿಡಗೇಡಿಗಳು ತಡರಾತ್ರಿ ಕಲ್ಲು ತೂರಿದ ಘಟನೆ ನಡೆದಿದೆ.ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿರುವ ಇನ್ಫೋಸಿಸ್ ಧರ್ಮಶಾಲಾ ಕಟ್ಟಡದಲ್ಲಿ ವೈದ್ಯ ವಿದ್ಯಾರ್ಥಿಗಳು ಉಳಿದುಕೊಳ್ಳಲು ಕಿಮ್ಸ್ ಆಡಳಿತ ಮಂಡಳಿ ವ್ಯವಸ್ಥೆ ಮಾಡಿದೆ. ಆದರೆ ತಡರಾತ್ರಿ ಏಕಾಏಕಿಯಾಗಿ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಇದರಿಂದ ಕಿಟಕಿ ಗ್ಲಾಸ್ ಒಡೆದು ಓರ್ವ ಮೆಡಿಕಲ್ ವಿದ್ಯಾರ್ಥಿಯ ಮೊಣಕಾಲಿಗೆ ಗಾಯವಾಗಿದೆ.ಕಿಮ್ಸ್ 136 ವೈದ್ಯಕೀಯ ವಿದ್ಯಾರ್ಥಿಗಳ ತಾತ್ಕಾಲಿಕ ಈ ಕಟ್ಟಡದಲ್ಲಿದ್ದಾರೆ ಎಂದಿನಂತೆ ಊಟ ಮಾಡಿ ಮಲಗಿದ್ದ ವಿದ್ಯಾರ್ಥಿಗಳ ಮೆಲೆ ಕಲ್ಲು, ಇಟ್ಟಿಗೆ ತೂರಿದ್ದು, ಕಿಟಕಿಯ ಗಾಜುಗಳು ಪುಡಿಪುಡಿಯಾಗಿ ಹಾಸಿಗೆಯಲ್ಲಿ ಬಿದ್ದಿದ್ದು, ವಿದ್ಯಾರ್ಥಿಗಳಿಗೆ ಆತಂಕದಲ್ಲಿದ್ದಾರೆ. ಕಿಮ್ಸ್ ಭದ್ರತಾ ಸಿಬ್ಬಂದಿ ಹಾಗೂ ಪಕ್ಕದಲ್ಲಿರುವ ಕಿಮ್ಸ್ ಕ್ವಾಟರ್ಸ್ ನಿವಾಸಿಗಳು ಆಗಮಿಸಿ ಗಾಯಾಳು ವಿದ್ಯಾರ್ಥಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ.






 Advertisement 




Sign in to your account
Username or Email Address


Password

 Remember Me


