ಕೋಲಾರ : 5 ವರ್ಷದ ಬಾಲಕಿ ಮೇಲೆ 60 ವರ್ಷದ ವ್ಯಕ್ತಿ ಅತ್ಯಚಾರ ಯತ್ನ ನಡೆಸಿರುವ ಘಟನೆ ಕೋಲಾರದಲ್ಲಿ ವರದಿಯಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಅತ್ಯಚಾರ ಯತ್ನ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.ವಿಚಾರ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಹಿರಿಯರೆಲ್ಲಾ ಸೇರಿ ಒಂದು ಸುತ್ತಿನ ಪಂಚಾಯತಿ ಮಾಡಿದ್ದು, ಮಗುವಿನ ಪೋಷಕರಿಗೆ ಪೊಲೀಸರಿಗೆ ದೂರು ನೀಡದಂತೆ ಒತ್ತಡ ಹಾಕಿದ್ದಾರೆ. ಆದ್ರೆ ಸಂಬಂದಿಕರ ಸಹಾಯ ಪಡೆದ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, 5 ವರ್ಷದ ಬಾಲಕಿಗೆ ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಅತ್ಯಚಾರ ಯತ್ನ ಮಾಡಿದ ಅರೋಪಿ ಇಷ್ಟೆಲ್ಲಾ ಅವಾಂತರವಾಗುತ್ತಿದ್ದಂತೆ ಇಲಿ ಪಾಷಣ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಆರೋಪಿಯನ್ನ ಬಂಧಿಸಿದ ಪೊಲೀಸರು ವಿಷ ಕುಡಿದು ಆತ್ಮಹತ್ಯಗೆ ಯತ್ನಿಸಿದ ವ್ಯಕ್ತಿಯನ್ನ ಅಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡುತ್ತಿದ್ದಾರೆ.Sign in to your account
Username or Email Address


Password

 Remember Me


