ಹಾಸನ: ಪತ್ನಿಯೇ ಪತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ.ಜಿಲ್ಲೆಯ ಬೇಲೂರು ತಾಲೂಕಿನ ತಗರೆ ಗ್ರಾಮದಲ್ಲಿ ಘಟನೆ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ ನಿಂಗರಾಜು ಮೇಲೆ ಪತ್ನಿ ಗಿರಿಜಾ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾಳೆ. ಪತಿ ನಿಂಗರಾಜು ಹಾಗೂ ಪತ್ನಿ ಗಿರಿಜಾ ನಡುವೆ ಜಗಳ ನಡೆದು ತಾರಕಕ್ಕೇರಿದೆ. ಮಧ್ಯರಾತ್ರಿ ಸುಮಾರು ಎರಡು ಗಂಟೆ ಸಮಯದಲ್ಲಿ ಪತಿ ನಿಂಗರಾಜು ಮಲಗಿದ್ದ ವೇಳೆ ಪತ್ನಿ ಗಿರಿಜಾ ಮಚ್ಚಿನಿಂದ ಕೈ, ಮುಖ ಹಾಗೂ ಕುತ್ತಿಗೆ ಭಾಗಕ್ಕೆ ಮನಸ್ಸೋ ಇಚ್ಛೆ ಕೊಚ್ಚಿದ್ದಾಳೆ.ತೀವ್ರವಾಗಿ ಗಾಯಗೊಂಡಿದ್ದ ನಿಂಗರಾಜುವಿಗೆ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಂಗರಾಜು ಸಂಬಂಧಿಕರು ಅರೇಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೋಲಿಸರು ಗಿರಿಜಾಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.Sign in to your account
Username or Email Address


Password

 Remember Me


