ಬೆಂಗಳೂರು: ಇಂದು ರಾಜ್ಯದಲ್ಲಿ 383 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 378 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ ಇವತ್ತು ಸಹ ಇಬ್ಬರು ಬಲಿಯಾಗಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12,303ಕ್ಕೆ ಏರಿಕೆಯಾಗಿದೆ.ಕೊರೊನಾ ಸೋಂಕಿತರ ಸಂಖ್ಯೆ 9,48,849ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 6,062 ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳ ಪೈಕಿ 122 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಬೆಂಗಳೂರು ನಗರ ಜಿಲ್ಲೆಯಲ್ಲಿ 4 ಸಾವು ಹೊರತುಪಡಿಸಿ ಉಳಿದ ಯಾವುದೇ ಜಿಲ್ಲೆಯಲ್ಲಿ ಸಾವು ಸಂಭವಿಸಿಲ್ಲ.ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.75 ಮತ್ತು ಮರಣ ಪ್ರಮಾಣ ಶೇ.1.04ರಷ್ಟು ದಾಖಲಾಗಿದೆ. ಇಂದು 50,827 ಸ್ಯಾಂಪಲ್ ಗಳನ್ನ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ರಾಜ್ಯದಲ್ಲಿ 1,36,188 ಜನರು ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ.ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 5, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 240, ಬೀದರ್ 1, ಚಾಮರಾಜನಗರ 0, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 2, ಚಿತ್ರದುರ್ಗ 3, ದಕ್ಷಿಣ ಕನ್ನಡ 17, ದಾವಣಗೆರೆ 0, ಧಾರವಾಡ 3, ಗದಗ 0, ಹಾಸನ 9, ಹಾವೇರಿ 1, ಕಲಬುರಗಿ 8, ಕೊಡಗು 3, ಕೋಲಾರ 1, ಕೊಪ್ಪಳ 0, ಮಂಡ್ಯ 2, ಮೈಸೂರು 26, ರಾಯಚೂರು 0, ರಾಮನಗರ 2, ಶಿವಮೊಗ್ಗ 18, ತುಮಕೂರು 12, ಉಡುಪಿ 12, ಉತ್ತರ ಕನ್ನಡ 0, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 2 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.Sign in to your account
Username or Email Address


Password

 Remember Me


