ಬೆಂಗಳೂರು: ಇಂದು ಕರ್ನಾಟಕದಲ್ಲಿ 317 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 287 ಜನ ಡಿಸ್ಚಾರ್ಜ್ ಆಗಿದ್ದಾರೆ. 5 ಜನ ಕೊರೊನಾಗೆ ಬಲಿಯಾಗಿದ್ದಾರೆ.ಇಂದು ರಾಜ್ಯದಲ್ಲಿ ಒಟ್ಟು 65,229 ಮಂದಿಗೆ ಲಸಿಕೆ ನೀಡಲು ಯೋಜನೆ ಹಾಕಿಕೊಳ್ಳಲಾಗಿತ್ತು. ಈ ಪೈಕಿ 27,645 (ಶೇ.42)ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ.ಇಂದು ಬೆಳಗಾವಿ, ಚಾಮರಾಜನಗರ, ಗದಗ, ಕೊಪ್ಪಳ, ರಾಯಚೂರು, ರಾಮನಗರ, ಉತ್ತರ ಕನ್ನಡ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,48,46ಕ್ಕೆ ಏರಿಕೆ ಆಗಿದೆ. ಈ ಪೈಕಿ 9,30,087 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 6,061 ಸಕ್ರಿಯ ಪ್ರಕರಣಗಳಿವೆ.ಒಟ್ಟು ಇಲ್ಲಿಯವರೆಗೆ 12,299 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 128 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 1,855 ಆಂಟಿಜನ್ ಟೆಸ್ಟ್ 44,013 ಆರ್ ಟಿ ಪಿಸಿಆರ್ ಸೇರಿದಂತೆ ಒಟ್ಟು 45,868 ಮಂದಿಗೆ ಪರೀಕ್ಷೆ ಮಾಡಲಾಗಿದೆ.ಇಂದು ಬೆಂಗಳೂರಿನಲ್ಲಿ 181 ಕೇಸ್ ವರದಿಯಾಗಿದೆ. ಮೈಸೂರು 29, ತುಮಕೂರು 17, ಉಡುಪಿ 14, ಮತ್ತು ದಕ್ಷಿಣ ಕನ್ನಡದಲ್ಲಿ 10 ಮಂದಿಗೆ ಸೋಂಕು ಬಂದಿದೆ. ಒಟ್ಟು 128 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 60, ತುಮಕೂರು 7, ಬೆಳಗಾವಿ 6, ತುಮಕೂರು 8 ಮತ್ತು ಹಾಸನ 5 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.






 Advertisement 




Sign in to your account
Username or Email Address


Password

 Remember Me


