ಯಾದಗಿರಿ: ಕೋಳಿ ಅಂಕದ ಮೂಲಕ ಜೂಜಾಟ ನಡೆಯುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿರುವ ಪೊಲೀಸರು, 22 ಹುಂಜಗಳೊಂದಿಗೆ 30 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಜಿಲ್ಲೆಯ ಸುರಪುರ ಉಪವಿಭಾಗದ ಹಲವು ಕಡೆ ಮತ್ತು ಹುಣಸಗಿ ತಾಲೂಕು ವ್ಯಾಪ್ತಿಯಲ್ಲಿ ಕಳೆದ ಹಲವಾರು ತಿಂಗಳುಗಳಿಂದ ಕೋಳಿ ಅಂಕದಲ್ಲಿ ಜೂಜು ನಡೆಯುತ್ತಿರುವ ಬಗ್ಗೆ ಡಿವೈಎಸ್ಪಿ ವೆಂಕಟೇಶ್ ಹುಗಿಬಂಡಿ ಕಚೇರಿಗೆ ಸಾಕಷ್ಟು ದೂರುಗಳು ಕೇಳಿ ಬಂದಿತ್ತು.ಇಂದು ಹುಣಸಗಿ ತಾಲೂಕಿನ ರಾಯಗೇರಾ ಗ್ರಾಮದ ಹೊರ ವಲಯದಲ್ಲಿ ಜೂಜಾಟ ನಡೆಯುತ್ತಿರುವ ಖಚಿತ ಮಾಹಿತಿ ಪಡೆದ ಪೊಲೀಸರು, ಅಡ್ಡೆ ಮೇಲೆ ದಾಳಿ ಮಾಡಿ 22 ಹುಂಜಗಳು 32 ಸಾವಿರ ನಗದು, 30 ಬೈಕ್ ಮತ್ತು 30 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.ಸುರಪುರ ಡಿವೈಎಸ್ಪಿ ವೆಂಕಟೇಶ್ ಹುಗಿಬಂಡಿ ಮತ್ತು ಪಿಎಸ್‍ಐ ಬಾಷುಮಿಯಾ ಜಂಟಿಯಾಗಿ ಏಕಕಾಲದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಕೊಡೆಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


