ಹಾವೇರಿ: ಆಕಸ್ಮಿಕವಾಗಿ ಬೆಂಕಿ ಬಿದ್ದು ಮೆಕ್ಕೆಜೋಳದ ತೆನೆಗಳು ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಮಣಕೂರು ಗ್ರಾಮದಲ್ಲಿ ನಡೆದಿದೆ.ರೈತ ರಂಗಪ್ಪ ಕಂಬಳಿಯವರ ಎಂಬವರಿಗೆ ಸೇರಿದ ಮೆಕ್ಕಜೋಳ ರಾಶಿ ಬೆಂಕಿಗೆ ಆಹುತಿಯಾಗಿದೆ. ಕಟಾವು ಮಾಡಿ ರಾಶಿ ಮಾಡಲು ಹಾಕಿದ್ದ ತೆನೆಗಳು ಸುಟ್ಟು ಕರಕಲಾಗಿವೆ. ಫಸಲುನ್ನು ಕಳೆದುಕೊಂಡ ರೈತ ರಂಗಪ್ಪ ಕಣ್ಣೀರು ಹಾಕುತ್ತಿದ್ದಾರೆ.ಇಪ್ಪತ್ತು ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಸಂಪೂರ್ಣ ಸುಟ್ಟ ಕರಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಷ್ಟರಲ್ಲಿ ಸುಟ್ಟು ಹೋಗಿವೆ. ಸುಮಾರು ಐದು ಲಕ್ಷ ರೂಪಾಯಿ ಮೌಲ್ಯದ ಮೆಕ್ಕೆಜೋಳ ಹಾನಿಗೊಳಗಾಗಿದೆ. ಹಲಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.


 Advertisement 







 Advertisement 




Sign in to your account
Username or Email Address


Password

 Remember Me


