ಬೆಂಗಳೂರು: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಬೆಂಗಳೂರು ಹೊರವಲಯದ ನೈಸ್ ರಸ್ತೆಯಲ್ಲಿ ನಡೆದಿದೆ.ಸಚಿವರು ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ನೈಸ್ ರಸ್ತೆಯ ಕದಂಬ ಹೊಟೇಲ್ ಬಳಿ ಕೆಎಸ್‍ಆರ್‍ಟಿಸಿ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನಯಿಂದ ಶ್ರೀನಿವಾಸ ಪೂಜಾರಿ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆಯಿಂದ ಕಾರು ಕೂಡ ಹಾನಿಗೊಳಗಾಗಿದೆ. ಈ ಘಟನೆ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.


 Advertisement 







 Advertisement 




Sign in to your account
Username or Email Address


Password

 Remember Me


