ಬೆಳಗಾವಿ: ಸಿಡಿಲು ಬಡಿದು ಯುವಕ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಿಡಗಲ್ ಗ್ರಾಮದ ಇಟ್ಟಂಗಿ ಭಟ್ಟಿಯಲ್ಲಿ ನಡೆದಿದೆ.ಗುರುನಾಥ ನಾರ್ವೇಕರ್(20) ಮೃತ ದುರ್ದೈವಿ. ಕೆಲ ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆ ಜೋಯಿಡಾ ತಾಲೂಕಿನ ಅಸು ಗ್ರಾಮದಿಂದ ಗುರುನಾಥ ಕೆಲಸಕ್ಕಾಗಿ ಆಗಮಿಸಿದ್ದರು. ಆದರೆ ನಿನ್ನೆ ಬೆಳಗಾವಿಯ ಸುತ್ತಮುತ್ತ ಸಂಜೆ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ.ಇಟ್ಟಂಗಿ ಭಟ್ಟಿಗೆ ಪ್ಲಾಸ್ಟಿಕ್ ಹೊದಿಕೆ ಹಾಕುತ್ತಿದ್ದಾಗ ಸಿಡಿಲು ಬಡಿದು ಗುರುನಾಥ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೆ ಈ ಘಟನೆ ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


 Advertisement 







 Advertisement 




Sign in to your account
Username or Email Address


Password

 Remember Me


