ಮೈಸೂರು: ಇಂದು ರಥ ಸಪ್ತಮಿ ಹಿನ್ನೆಲೆಯಲ್ಲಿ ಮೈಸೂರು ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಉತ್ಸವ ಮೂರ್ತಿಗೆ ರಾಜವಂಶಸ್ಥ ಯದುವೀರ್ ವಿಶೇಷ ಪೂಜೆ ಸಲ್ಲಿಸಿದರು.ಕೋಟೆ ಆಂಜನೇಯ ದೇವಾಲಯ ಮುಂಭಾಗ ಮೈಸೂರು ಯೋಗ ಒಕ್ಕೂಟ ಪ್ರತಿ ವರ್ಷದಂತೆ ಈ ವರ್ಷವೂ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಆಯೋಜಿಸಿತ್ತು. ಇದರಲ್ಲಿ ನೂರಾರು ಯೋಗ ಪಟುಗಳು ಭಾಗವಹಿಸಿ 108 ಸೂರ್ಯ ವಂದನೆ ಮಾಡಿದರು.ಈ ಸಂದರ್ಭದಲ್ಲಿ ಭಗವಾನ್ ಸೂರ್ಯ ನಾರಾಯಣ ಭಾವ ಚಿತ್ರವನ್ನು ಇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.Sign in to your account
Username or Email Address


Password

 Remember Me


