ಬೆಂಗಳೂರು: ಇಂದು ಕರ್ನಾಟಕದಲ್ಲಿ 406 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 306 ಜನ ಡಿಸ್ಚಾರ್ಜ್ ಆಗಿದ್ದಾರೆ. 6 ಜನ ಕೊರೊನಾಗೆ ಬಲಿಯಾಗಿದ್ದಾರೆ.ಇಂದು ರಾಜ್ಯದಲ್ಲಿ ಒಟ್ಟು 54,682 ಮಂದಿಗೆ ಲಸಿಕೆ ನೀಡಲು ಯೋಜನೆ ಹಾಕಿಕೊಳ್ಳಲಾಗಿತ್ತು. ಈ ಪೈಕಿ 15,786 (ಶೇ.29)ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ.ಇಂದು ಬಾಗಲಕೋಟೆ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು, ಹಾವೇರಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,46,860 ಕ್ಕೆ ಏರಿಕೆ ಆಗಿದೆ. ಈ ಪೈಕಿ 9,28,767 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 5,792 ಸಕ್ರಿಯ ಪ್ರಕರಣಗಳಿವೆ.ಒಟ್ಟು ಇಲ್ಲಿಯವರೆಗೆ 12,282 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 125 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 4009 ಆಂಟಿಜನ್ ಟೆಸ್ಟ್, 55,626 ಆರ್ ಟಿ ಪಿಸಿಆರ್ ಸೇರಿದಂತೆ ಒಟ್ಟು 59,635 ಮಂದಿಗೆ ಪರೀಕ್ಷೆ ಮಾಡಲಾಗಿದೆ.ಇಂದು ಬೆಂಗಳೂರಿನಲ್ಲಿ 256, ಕೇಸ್ ವರದಿಯಾಗಿದೆ. ತುಮಕೂರು 24, ದಕ್ಷಿಣ ಕನ್ನಡ 20, ಕಲಬುರಗಿ 14, ಮೈಸೂರು 12, ಮತ್ತು ಬೆಳಗಾವಿಯಲ್ಲಿ 11 ಮಂದಿಗೆ ಸೋಂಕು ಬಂದಿದೆ. ಒಟ್ಟು 125 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 63, ಕಲಬುರಗಿ 10, ಹಾಸನ 5, ದಕ್ಷಿಣ ಕನ್ನಡ 3 ಮತ್ತು ಉಡುಪಿಯ 4 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.






 Advertisement 




Sign in to your account
Username or Email Address


Password

 Remember Me


