ಮಂಡ್ಯ: ಸಿದ್ದರಾಮಯ್ಯ, ಯಶ್ ಅಂತ್ಯ ಸಂಸ್ಕಾರಕ್ಕೆ ಬರುವಂತೆ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ನಡೆದಿದೆ.ರಾಮಕೃಷ್ಣ(25) ಆತ್ಮಹತ್ಯೆ ಮಾಡಿಕೊಂಡ ಯುವಕ ಆಗಿದ್ದು, ಈತ ಪೆಟ್ರೋಲ್ ಬಂಕ್‍ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದನು. ಮೊನ್ನೆ ಕೆಲಸ ಮುಗಿಸಿಕೊಂಡು ಬಂದಿದ್ದ ಯುವಕ ನಿನ್ನೆ ರಜೆ ಹಾಕಿ ಮನೆಯಲ್ಲೇ ಇದ್ದ. ಆದರೆ ಮನೆಯಲ್ಲಿ ಯಾರೂ ಇಲ್ಲದಿರುವ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಸಾಯುವ ಮುನ್ನ ರಾಮಕೃಷ್ಣ ಡೆತ್ ನೋಟ್ ಬರೆದಿದ್ದು, ಅದರಲ್ಲಿ ನನ್ನ ಅಂತ್ಯಕ್ರಿಯೆಗೆ ರಾಕಿಂಗ್ ಸ್ಟಾರ್ ಯಶ್, ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಬೇಕೆಂದು ಮನವಿ ಮಾಡಿಕೊಳ್ಳುವ ಮೂಲಕ ತನ್ನ ಕೊನೆಯ ಆಸೆಯನ್ನು ಹೇಳಿಕೊಂಡಿದ್ದಾನೆ. ಅಭಿಮಾನಿಯ ಈ ಕೋರಿಕೆ ಈಡೇರಿಸಲು ಸಿದ್ದರಾಮಯ್ಯ ಅವರು ಇಂದು ಕೋಡಿದೊಡ್ಡಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.15 ವರ್ಷದ ಹಿಂದೆ ರಾಮಕೃಷ್ಣ ತಂದೆ ಚಂದ್ರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ರಾಮಕೃಷ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.Sign in to your account
Username or Email Address


Password

 Remember Me


